ಬೆಂಗಳೂರು: ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಮರಳು ನೀತಿ ಜಾರಿ, ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರುವಂತೆ ಕೋರಿ ಕರಾವಳಿಯ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಹರಿಯುವ ನದಿಯಿಂದ ಬಹಳ ಹಿಂದಿನಿಂದಲೂ ಸಾಂಪ್ರದಾಯಿಕ ಮರಳು ತೆಗೆಯಲಾಗುತ್ತಿದೆ. ಬೇರೆ ಜಿಲ್ಲೆಗಳಿಗೆ ಅನ್ವಯಿಸುವ ನಿಯಮಗಳು ಈ ಜಿಲ್ಲೆಗಳಿಗೆ ಪೂರಕವಾಗಿಲ್ಲ. ಆದ್ದರಿಂದ ನದಿಯಲ್ಲಿ ಮರಳು ಗಣಿಗಾರಿಕೆ ನಿಷೇಧವನ್ನು ಹಿಂಪಡೆಯುವಂತೆಯೂ ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು. ಈ ನೀತಿ ಕೇವಲ ಕರಾವಳಿ ಜಿಲ್ಲೆಗಳಿಗಷ್ಟೇ ಅನ್ವಯವಾಗುವಂತಿರಲಿ ಎಂದೂ ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ. ಅನೇಕ ಪ್ರದೇಶಗಳಲ್ಲಿ ಮಳೆ ಹಾನಿ ಸಂಭವಿಸಿದೆ. ಅಪಾರ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಆದ್ದರಿಂದ ಜಿಲ್ಲೆಗೆ ಮಳೆಹಾನಿ ಪರಿಹಾರವನ್ನು ಬಿಡುಗಡೆ ಮಾಡುವಂತೆಯೂ ಬಿಎಸ್ವೈ ಅವರನ್ನು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಅಂಗಾರ, ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.