ಮೈಸೂರು: ನಗರದಲ್ಲಿನ ಮೃಗಾಲಯಕ್ಕೆ ಆಫ್ರಿಕಾದಿಂದ ಮೂರು ಚೀತಾಗಳನ್ನು ತರಲಾಗಿದ್ದು, ದಸರಾ ಸಂದರ್ಭದಲ್ಲಿ ಇವುಗಳನ್ನು ನೋಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ಈ ಚೀತಾಗಳ ಸಾರ್ವಜನಿಕ ವೀಕ್ಷಣೆಗೆ ಸಹಕಾರ ಮತ್ತು ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಚಾಲನೆ ನೀಡಿದ್ದಾರೆ. ಭಾರತದ ಹೈದರಾಬಾದ್ನಲ್ಲಿ ಮಾತ್ರವೇ ಈ ವರೆಗೆ ಆಫ್ರಿಕಾದ ಚೀತಾಗಳಿತ್ತು. ಇದೀಗ ಮೈಸೂರಿಗೂ ಆಫ್ರಿಕಾ ಚೀತಾಗಳ ಆಗಮನವಾಗಿದೆ. ಆಗಸ್ಟ್ 17 ರಂದು ಪ್ರಾಣಿ ವಿನಿಮಯ ಯೋಜನೆಯಡಿ ದಕ್ಷಿಣ ಆಫ್ರಿಕಾದಿಂದ ಒಂದು ಗಂಡು, ಎರಡು ಹೆಣ್ಣು ಚೀತಾಗಳನ್ನು ಮೈಸೂರಿಗೆ ತರಲಾಗಿದೆ.
ಇನ್ನು ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾವನ್ನು ಆಚರಣೆ ಮಾಡಲಾಗುವುದು. ಮೈಸೂರು ಮೃಗಾಲಯ, ಚಾಮುಂಡಿ ಬೆಟ್ಟಕ್ಕೆ ಹಾಗೂ ದಸರಾಗೆ ಹೆಚ್ಚಿನ ಜನರು ಆಗಮಿಸುವ ಹಿನ್ನೆಲೆಯಲ್ಲಿ ನಿರ್ಬಂಧ ಹೇರಲಾಗುವುದು ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ಕೊರೋನಾ ನಿಯಮಗಳನ್ನು ಪಾಲಿಸಿಕೊಂಡೇ ದಸರಾ ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.