ನವದೆಹಲಿ: ಸ್ವಾವಲಂಬಿ, ಆತ್ಮನಿರ್ಭರ ಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತೊಂದು ದಿಟ್ಟ ಹೆಜ್ಜೆ ಇರಿಸಿದೆ. ಚೀನಾ ಮತ್ತು ಥಾಯ್ಲೆಂಡ್ಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದ 3,668.38 ಕೋಟಿ ರೂ. ಮೌಲ್ಯದ ಎಸಿ ಮತ್ತು ರೆಫ್ರಿಜರೆಂಟ್ಸ್ ವಸ್ತುಗಳ ಆಮದನ್ನು ಭಾರತ ನಿಷೇಧಿಸಿದೆ.
ಕಳೆದ ಜುಲೈ ತಿಂಗಳಿನಲ್ಲಿ ಕೇಂದ್ರ ಸರ್ಕಾರ ವಿದೇಶಗಳಿಂದ ಆಮದಾಗುತ್ತಿದ್ದ ಟೆಲಿವಿಷನ್ ಸೆಟ್ಗಳ ಆಮದಿನ ಮೇಲೆ ನಿಷೇಧ ಹೇರಿತ್ತು. ಒಂದು ವೇಳೆ ಆಮದು ಮಾಡಿಕೊಳ್ಳಲೇ ಬೇಕೆಂದಿದ್ದರೆ ಸಂಬಂಧಿಸಿದ ವ್ಯಕ್ತಿಗಳು ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ನಿಂದ ಪರವಾನಿಗೆ, ಅನುಮತಿ ಪಡೆಯುವಂತೆಯೂ ಸೂಚನೆ ನೀಡಲಾಗಿತ್ತು. ಆದರೆ ಎಸಿ ವಿಚಾರಕ್ಕೆ ಸಂಬಂಧಿಸಿದಂತೆ ಅವುಗಳನ್ನು ಯಾವುದೇ ರೀತಿಯಲ್ಲಿಯೂ ದೇಶದೊಳಗೆ ಆಮದು ಮಾಡಿಕೊಳ್ಳುವಂತಿಲ್ಲ ಎಂದೂ ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿದೆ.
2020ನೇ ಸಾಲಿನಲ್ಲಿ ದೇಶ ಚೀನಾ ಮತ್ತು ಥಾಯ್ಲೆಂಡ್ಗಳಿಂದ ಒಟ್ಟು ಸುಮಾರು 649 ದಶಲಕ್ಷ ಡಾಲರ್ ಮೌಲ್ಯದ ಸ್ಪಿಲ್ಟ್ ಏರ್ ಕಂಡೀಷನ್ಗಳನ್ನು ಆಮದು ಮಾಡಿಕೊಂಡಿದೆ. ಹಾಗೆಯೇ 35 ದಶಲಕ್ಷ ಡಾಲರ್ಗಳ ವಿಂಡೋ ಎಸಿಗಳನ್ನೂ ಆಮದು ಮಾಡಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.