ಪ್ರಯಾಗ್ರಾಜ್: ಉತ್ತರಪ್ರದೇಶದ ಪ್ರಯಾಗ್ರಾಜ್ನ ಕುಂಭಮೇಳ ನಡೆಯುವ ಗಂಗಾ ಸಂಗಮ ಪ್ರದೇಶದಲ್ಲಿ ಅಕ್ರಮವಾಗಿ ಮಸೀದಿಯೊಂದನ್ನು ನಿರ್ಮಾಣ ಮಾಡಲಾಗುತ್ತಿದೆ. ವಿಶ್ವ ಹಿಂದೂ ಪರಿಷತ್ ಇದರ ವಿರುದ್ಧ ಹೋರಾಟ ನಡೆಸಲು ಮುಂದಾಗಿದೆ.
ಈಗಾಗಲೇ ವಿಎಚ್ಪಿ ಜಿಲ್ಲಾಡಳಿತಕ್ಕೆ ಮನವಿಯೊಂದನ್ನು ಸಲ್ಲಿಸಿದ್ದು, ಗ್ರಾಮಸಭೆಯ ಭೂಮಿಯಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣವಾಗುತ್ತಿದೆ. ಇದನ್ನು ತಡೆಯಬೇಕು ಎಂದು ಆಗ್ರಹಿಸಿದೆ.
ಜುನ್ಸಿ ಪ್ರದೇಶದ ಹವೇಲಿಯ ಗ್ರಾಮದಲ್ಲಿ ಮಸೀದಿ ನಿರ್ಮಾಣವಾಗುತ್ತಿದೆ ಎಂದು ವಿಎಚ್ಪಿ ಹೇಳಿದೆ. ಕುಂಭಮೇಳ ಕ್ಷೇತ್ರದ ಗಂಗಾ ತಟದ ಸಮುದ್ರ ಕೂಪದಲ್ಲಿ ನಿರ್ಮಾಣವಾಗುತ್ತಿರುವ ಈ ಮಸೀದಿಯನ್ನು ನೆಲಸಮಗೊಳಿಸಬೇಕು ಎಂದು ಆಗ್ರಹಿಸಿದೆ.
ಏಳು ದಿನದೊಳಗೆ ಮಸೀದಿಯನ್ನು ನೆಲಸಮ ಮಾಡಬೇಕು ಇಲ್ಲದಿದ್ದರೆ ಉಗ್ರ ಹೋರಾಟವನ್ನು ನಡೆಸುವುದಾಗಿ ಎಚ್ಚರಿಕೆಯನ್ನು ನೀಡಿದೆ.
ಸಂಗಮ ಕ್ಷೇತ್ರದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಅಕ್ರಮವಾಗಿ ಮಸೀದಿ ನಿರ್ಮಾಣ ಮಾಡಲಾಗುತ್ತಿದೆ ಎಂದು ವಿಎಚ್ಪಿ ಆರೋಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.