ಕಲಬುರ್ಗಿ: ಪ್ರಾಕೃತಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಉಂಟಾದ ಹಾನಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೋಶದಿಂದ ಐದು ಪಟ್ಟು ಹೆಚ್ಚು ಪರಿಹಾರ ಮೊತ್ತ ನೀಡಲು ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಅವರು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಈ ವಿಚಾರವನ್ನು ತಿಳಿಸಿದರು. ಮುಂದಿನ ವರ್ಷದಿಂದ ತೊಡಗಿದಂತೆ ಇಂತಹ ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಇನ್ನಿತರ ಪ್ರಾಕೃತಿಕ ವಿಕೋಪದ ಹಾನಿಗೆ ಐದು ಪಟ್ಟು ಹೆಚ್ಚು ಪರಿಹಾರ ದೊರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇನ್ನು ಕಲಬುರ್ಗಿ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಖಾತೆಯಲ್ಲಿ 20 ಕೋಟಿ ರೂ. ಈಗಾಗಲೇ ಇದ್ದು, ಯಾದಗಿರಿ ಜಿಲ್ಲಾಧಿಕಾರಿ ಖಾತೆಯಲ್ಲಿ 11 ಕೋಟಿ ರೂ. ಲಭ್ಯವಿದೆ. ಸದ್ಯದ ಪರಿಹಾರ ಕಾರ್ಯಗಳಿಗೆ ಯಾವುದೇ ರೀತಿಯಲ್ಲಿ ಹಣದ ಅಭಾವ ಉಂಟಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 173 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶ ಎಂದು ಸರ್ಕಾರ ಘೋಷಣೆ ಮಾಡಿರುವುದಾಗಿಯೂ ಅವರು ತಿಳಿಸಿದ್ದಾರೆ.
ಕಲಬುರ್ಗಿಯ ಅಫಜಲಪುರ, ಆಳಂದ, ಕಲಬುರ್ಗಿ, ಕಮಲಾಪುರ, ಚಿಂಚೋಳಿ , ಯಡ್ರಾಮಿ, ಕಾಳಗಿ, ಚಿತ್ತಾಪುರ ತಾಲ್ಲೂಕುಗಳನ್ನೂ ಪ್ರವಾಹ ಪೀಡಿತ ಎಂದು ಘೋಷಣೆ ಮಾಡಲಾಗಿರುವುದಾಗಿ ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.