ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ಪೂರೈಕೆಗೆ ನವೆಂಬರ್ 1 ರಿಂದ ತೊಡಗಿದಂತೆ ಒಟಿಪಿ ಅಗತ್ಯವಾಗಿದೆ. ಅಡುಗೆ ಅನಿಲ ಸಿಲಿಂಡರ್ಗಳ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಒಟಿಪಿ ಕಡ್ಡಾಯ ಎಂಬ ನಿಯಮವನ್ನು ಜಾರಿಗೆ ತರಲಾಗಿದೆ.
ದೇಶದ ಕೆಲವು ಕಡೆಗಳಲ್ಲಿ ಈ ನಿಯಮ ಜಾರಿಯಲ್ಲಿದ್ದರೂ, ಈ ವರೆಗೆ ಗ್ಯಾಸ್ ವಿತರಕರಾಗಲಿ, ಪಡೆದುಕೊಳ್ಳುವವರಾಗಲೀ ಈ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಆದರೆ ನವೆಂಬರ್ 1 ರಿಂದ ತೊಡಗಿದಂತೆ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಲು ಒಟಿಪಿ ಕಡ್ಡಾಯವಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೈಲ ಮಧ್ಯವರ್ತಿಗಳು ಗ್ಯಾಸ್ ಸಿಲಿಂಡರ್ ಕಳ್ಳತನವನ್ನು, ವಂಚನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸರಿಯಾದ ಗ್ರಾಹಕರನ್ನು ಗುರುತಿಸುವ ನಿಟ್ಟಿನಲ್ಲಿ ಡೆಲಿವರೀ ದೃಢೀಕರಣ ಕೋಡ್ (ಡಿಎಸಿ) ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಒಟಿಪಿ ಕಡ್ಡಾಯ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಗ್ಯಾಸ್ ಏಜೆನ್ಸಿ ಕಂಪೆನಿಗಳಲ್ಲಿ ಗ್ಯಾಸ್ ಸಿಲಿಂಡರ್ ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆಗಳನ್ನು ನೋಂದಾಯಿಸಿಕೊಳ್ಳದೇ ಇದ್ದವರು, ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಗ್ಯಾಸ್ ಬುಕ್ ಮಾಡಿದಾಗ ಸಂಸ್ಥೆಯಿಂದ ಆ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುತ್ತದೆ. ಗ್ಯಾಸ್ ಸಿಲಿಂಡರ್ ಪಡೆಯುವ ಸಂದರ್ಭದಲ್ಲಿ ಈ ಒಟಿಪಿ ಹೇಳಿದಲ್ಲಿ ಮಾತ್ರವೇ ಸಿಲಿಂಡರ್ ಕೈ ಸೇರಲಿದೆ. ಸಿಲಿಂಡರ್ ವಿತರಣೆಯ ಸಂದರ್ಭದಲ್ಲಿ ನಡೆಯುತ್ತಿರುವ ಕಳ್ಳಾಟಗಳನ್ನು, ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಈ ಕ್ರಮ ಮಹತ್ವ ಪಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.