ಬಲರಾಂಪುರ: ನವರಾತ್ರಿಯ ಶುಭ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ರಾಜ್ಯದಲ್ಲಿ ʼಮಿಷನ್ ಶಕ್ತಿʼ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದ್ದಾರೆ. ರಾಜ್ಯದ ಮಹಿಳಾ ಭದ್ರತೆಗಾಗಿ ‘ಮಿಷನ್ ಶಕ್ತಿ’ ಕಾರ್ಯಕ್ರಮವನ್ನು ಅರಂಭಿಸಲಾಗಿದೆ.
ಈ ವೇಳೆ ಮಾತನಾಡಿದ ಯೋಗಿ, ರಾಜ್ಯಾದ್ಯಂತ 1535 ಪೊಲೀಸ್ ಠಾಣೆಗಳಲ್ಲಿ ಮಹಿಳಾ ದೂರುದಾರರಿಗೆ ಈಗ ಪ್ರತ್ಯೇಕ ಕೊಠಡಿ ಇದೆ ಎಂದು ಘೋಷಿಸಿದರು.
ಉತ್ತರಪ್ರದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಮಿಷನ್ ಶಕ್ತಿಗೆ ನವರಾತ್ರಿಯ ಮೊದಲ ದಿನದಂದೇ ಪ್ರಾರಂಭ ನೀಡಿದ್ದು ವಿಶೇಷ.
“ರಾಜ್ಯದಾದ್ಯಂತ 1535 ಪೊಲೀಸ್ ಠಾಣೆಗಳಲ್ಲಿ ಮಹಿಳಾ ದೂರುದಾರರಿಗೆ ಪ್ರತ್ಯೇಕ ಕೊಠಡಿ ಇದೆ, ಅಲ್ಲಿ ಮಹಿಳಾ ಪೊಲೀಸ್ ಕಾನ್ಸ್ಟೆಬಲ್ ಹಾಜರಿರಲಿದ್ದಾರೆ ಮತ್ತು ಮಹಿಳೆಯರ ದೂರಿನ ಮೇಲೆ ತುರ್ತು ಕ್ರಮ ಕೈಗೊಳ್ಳಲಾಗುತ್ತದೆ. ಮಹಿಳೆಯರ ಮೇಲಿನ ಅಪರಾಧಗಳ ಅಪರಾಧಿಗಳಿಗೆ ಶೀಘ್ರವಾಗಿ ಶಿಕ್ಷೆಯಾಗಲಿದೆ” ಎಂದಿದ್ದಾರೆ.
ಈ ಸಂದರ್ಭದಲ್ಲಿ, ಯುವತಿಯರು ಮಹಿಳಾ ಶಕ್ತಿಯನ್ನು ಪ್ರದರ್ಶಿಸುವ ಕಾರ್ಯವಾಗಿ ಸ್ವರಕ್ಷಣೆ ತಂತ್ರಗಳನ್ನು ಪ್ರದರ್ಶಿಸಿದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ಸಿಎಂ ಯೋಗಿ ನವರಾತ್ರಿಯ ಸಂದರ್ಭದಲ್ಲಿ ದೇವಿ ಪಟನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.