ಮೈಸೂರು: ರಾಜ್ಯದಲ್ಲಿ ಸುರಿದ ಬಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ಥರಿಗೆ ತಕ್ಷಣದ ಪರಿಹಾರವಾಗಿ 10 ಸಾವಿರ ರೂ. ಗಳನ್ನು ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ದಸರಾ ಉದ್ಘಾಟನಾ ಕಾರ್ಯಕ್ರಮಗಳ ಬಳಿಕ ಮಾತನಾಡಿದ ಅವರು, ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಕೇಂದ್ರ ಗೃಹ ಸಚಿವರ ಜೊತೆಗೂ ಚರ್ಚಿಸಲಾಗಿದೆ. ನೆರವು, ಪರಿಹಾರ ಕುರಿತಂತೆಯೂ ಚರ್ಚಿಸಿರುವುದಾಗಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡದ ಪ್ರವಾಹ ಪರಿಸ್ಥಿತಿ ಬಗ್ಗೆ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಾಗಿದೆ. ಹತ್ತು ಸಾವಿರಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಒಂದು ವಾರದಲ್ಲೇ ನಷ್ಟದ ಪ್ರಮಾಣ ಅಂದಾಜಿಸಿ ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಅನುದಾನದ ಕೊರತೆ ಇಲ್ಲ. ಎನ್ಡಿಆರ್ಎಫ್ ನಿಧಿಯಿಂದ ಹಾನಿಗೊಳಗಾದವರು, ಮನೆ ಕಳೆದುಕೊಂಡವರಿಗೆ ಐದು ಲಕ್ಷ ಪರಿಹಾರ ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.