ನವದೆಹಲಿ: ಅಯೋಧ್ಯೆಯಲ್ಲಿ ನಡೆಯುವ ಪೌರಾಣಿಕ ಮಹತ್ವದ ರಾಮಲೀಲಾದ ನೇರ ಪ್ರಸಾರವನ್ನು ರಾಷ್ಟ್ರೀಯ ಪ್ರಸಾರಕ ದೂರದರ್ಶನ ಮಾಡುತ್ತಿದೆ. ಈ ಬಗ್ಗೆ ಉತ್ತರ ಪ್ರದೇಶದ ಮಾಹಿತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಭಗವಾನ್ ಶ್ರೀ ರಾಮನ ಜೀವನವನ್ನು ಅನಾವರಣಗೊಳಿಸುವ ರಾಮಲೀಲಾವನ್ನು ನವರಾತ್ರಿಯ ಶುಭ ಸಂದರ್ಭದಲ್ಲಿ ದೇಗುಲ ನಗರಿ ಅಯೋಧ್ಯೆಯಲ್ಲಿ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಇಲಾಖೆಯ ಸಹಕಾರದೊಂದಿಗೆ ಆಯೋಜನೆ ಮಾಡಲಾಗುತ್ತಿದೆ. ಅಕ್ಟೋಬರ್ 17 ರಿಂದ 25ರವರೆಗೆ ಈ ಕಾರ್ಯಕ್ರಮ ನಡೆಯಲಿದೆ.
ನಿನ್ನೆಯಿಂದಲೇ ದೂರದರ್ಶನದಲ್ಲಿ ರಾಮಲೀಲಾ ನೇರ ಪ್ರಸಾರವಾಗುತ್ತಿದೆ, ಯೂಟ್ಯೂಬ್ನಲ್ಲಿ ಕೂಡ ಇದನ್ನು ವೀಕ್ಷಣೆ ಮಾಡಬಹುದಾಗಿದೆ.
ರಾತ್ರಿ 7 ಗಂಟೆಯ ನಂತರ ನೇರಪ್ರಸಾರ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.