ನಾಗ್ಪುರ: ಮಹಾರಾಷ್ಟ್ರದ ಉತ್ತರ ಗೋಡ್ಚಿರೋಲಿ ಪ್ರದೇಶದ ಧನೊರ ತಾಲೂಕಿನ ಕೋಸ್ಮಿ-ಕಿಸ್ನೆಲಿ ಅರಣ್ಯದಲ್ಲಿ ಭಾನುವಾರ ಆರು ಮಂದಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ ನಾಲ್ಕು ಮಂದಿ ಮಹಿಳೆಯರು.
ಗೋಡ್ಚಿರೊಲಿ ಪೊಲೀಸರಿಗೆ ಸಿಕ್ಕ ಮಹತ್ವದ ಯಶಸ್ಸು ಇದೆಂದು ಬಣ್ಣಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ವಿವಿಧ ಕಾರ್ಯಾಚರಣೆಗಳಲ್ಲಿ ಇವರು ಒಟ್ಟು 20 ಮಾವೋವಾದಿಗಳನ್ನು ಸಂಹರಿಸಿದ್ದಾರೆ.
ಮಾವೋವಾದಿಗಳು ಅರಣ್ಯದಲ್ಲಿ ಒಟ್ಟು ಸೇರಿರುವುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದಾರೆ. ಬಳಿಕ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದೆ. 5 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರದೇಶದಿಂದ ಹಲವು ವಸ್ತುಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಗೋಡ್ಚಿರೊಲಿ ಪೊಲೀಸ್ ಕೇಂದ್ರ ಕಚೇರಿಗೆ ಹೆಲಿಕಾಪ್ಟರ್ ಮೂಲಕ ಮೃತ ಮಾವೋವಾದಿಗಳ ದೇಹವನ್ನು ತರಲಾಗಿದೆ. ಇವರುಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.