ನವದೆಹಲಿ: ಚೀನಾದ ಮೊಬೈಲ್ ಫೋನ್ ಕ್ಸಿಯೋಮಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಅರುಣಾಚಲ ಪ್ರದೇಶದ ಹವಾಮಾನ ಮಾಹಿತಿಯನ್ನು ಅದು ತೋರಿಸದೆ ಇರುವುದು ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಭಾರತೀಯರು ಕ್ಸಿಯೋಮಿಯನ್ನು ಪ್ರಶ್ನೆ ಮಾಡಿದ್ದಾರೆ.
ಚೀನಾದ ಮೊಬೈಲ್ ತಯಾರಕನಾದ ಕ್ಸಿಯೋಮಿ ಉದ್ದೇಶಪೂರ್ವಕವಾಗಿ ಈ ರೀತಿ ಮಾಡುತ್ತಿದೆ ಎನ್ನುವುದು ಅನೇಕರ ಆರೋಪವಾಗಿದೆ.
ಆದರೆ ಕಂಪನಿ ಈ ಆರೋಪವನ್ನು ನಿರಾಕರಿಸಿದ್ದು, ತಾಂತ್ರಿಕ ದೋಷದ ಪರಿಣಾಮವಾಗಿ ರೀತಿ ಆಗಿದೆ ಎಂದಿದೆ. ಅಲ್ಲದೇ ಶೀಘ್ರದಲ್ಲೇ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದೆ.
ಅರುಣಾಚಲ ಪ್ರದೇಶವನ್ನು ಚೀನಾ ತನ್ನ ಭೂಪ್ರದೇಶ ಎಂದು ವಾದ ಮಾಡುತ್ತಿದೆ, ಪ್ರಸ್ತುತ ಚೀನಾ ಮತ್ತು ಭಾರತದ ನಡುವೆ ಗಡಿ ಸಂಘರ್ಷಗಳು ತಾರಕಕ್ಕೇರಿದೆ. ಇಂತಹ ಸಂದರ್ಭದಲ್ಲಿ ಭಾರತದಲ್ಲಿ ಹೆಸರು ಮಾಡಿರುವ ಚೀನಾದ ಫೋನ್ ತಯಾರಕ ಸಂಸ್ಥೆ ಭಾರತೀಯರ ಭಾವನೆಗಳ ಜೊತೆ ಆಟವಾಡುತ್ತಿರುವುದು ಭಾರತೀಯರನ್ನು ಕೆರಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.