ನವದೆಹಲಿ: ಪ್ರಸ್ತುತ ಖಾರಿಫ್ ಮಾರ್ಕೆಟಿಂಗ್ ಸೀಸನ್ನಲ್ಲಿ ಭತ್ತ ಖರೀದಿ ಭರದಿಂದ ಸಾಗಿದೆ. 6. 69 ಲಕ್ಷ ರೈತರಿಂದ 76 ಲಕ್ಷ ಟನ್ ಭತ್ತವನ್ನು ಸಂಗ್ರಹಿಸಲಾಗಿದೆ. ಅಸ್ತಿತ್ವದಲ್ಲಿರುವ ಎಂಎಸ್ಪಿ ಯೋಜನೆಯ ಪ್ರಕಾರ ರೈತರಿಂದ ಕನಿಷ್ಠ ಬೆಂಬಲ ಬೆಲೆಗೆ ಖರೀದಿಸುವುದನ್ನು ಕೃಷಿ ಸಚಿವಾಲಯವು ಮುಂದುವರೆಸಿದೆ. ಇಲ್ಲಿಯವರೆಗೆ ವಿನಿಯೋಗಿಸಲಾದ ಒಟ್ಟು ಎಂಎಸ್ಪಿ ಮೌಲ್ಯ 14, 495 ಕೋಟಿ ರೂಪಾಯಿ ಎಂದು ಮೂಲಗಳು ತಿಳಿಸಿವೆ.
ಬೆಂಬಲ ಬೆಲೆ ಯೋಜನೆಯಡಿ ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್, ಹರಿಯಾಣ, ಉತ್ತರ ಪ್ರದೇಶ, ಒಡಿಶಾ, ರಾಜಸ್ಥಾನ ಮತ್ತು ಆಂಧ್ರಪ್ರದೇಶ ರಾಜ್ಯಗಳಿಂದ 41 ಲಕ್ಷ ಟನ್ ಧಾನ್ಯ ಮತ್ತು ಎಣ್ಣೆಕಾಳುಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಸರ್ಕಾರವು ತನ್ನ ನೋಡಲ್ ಏಜೆನ್ಸಿಗಳ ಮೂಲಕ 723 ಟನ್ಗಳಷ್ಟು ಹೆಸರುಬೇಳೆ ಮತ್ತು ಉರ್ದು ಅನ್ನು 5 ಕೋಟಿ 21 ಲಕ್ಷ ರೂಪಾಯಿಗಳ ಎಂಎಸ್ಪಿ ಮೌಲ್ಯದೊಂದಿಗೆ ಖರೀದಿಸಿದೆ. ತಮಿಳುನಾಡು, ಮಹಾರಾಷ್ಟ್ರ ಮತ್ತು ಹರಿಯಾಣದ 681 ರೈತರಿಗೆ ಇದರಿಂದ ಲಾಭವಾಗಿದೆ.
ಖಾರಿಫ್ ಮಾರ್ಕೆಟಿಂಗ್ ಸೀಸನ್ 2020-21ರ ಅವಧಿಯಲ್ಲಿ ಹತ್ತಿ ಖರೀದಿ ಈ ವರ್ಷದ ಅಕ್ಟೋಬರ್ 1 ರಿಂದ ಪ್ರಾರಂಭವಾಗಿದೆ. ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾದ ಸಂಚಿತ ಸಂಗ್ರಹವು ಎಂಎಸ್ಪಿ ಅಡಿಯಲ್ಲಿ 1. 50 ಲಕ್ಷ ಬೇಲ್ಗಳನ್ನು ತಲುಪಿದೆ, 30 ಸಾವಿರಕ್ಕೂ ಹೆಚ್ಚು ರೈತರಿಗೆ ಇದರಿಂದ ಪ್ರಯೋಜನವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.