ಮೈಸೂರು: ಮೈಸೂರು ವಿಶ್ವ ವಿದ್ಯಾಲಯದ ಶತಮಾನೋತ್ಸವ, ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದರು.
ಘಟಿಕೋತ್ಸವ ಕಾರ್ಯಕ್ರಮಕ್ಕೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ ಮೋದಿ, ಮೈಸೂರು ದಸರಾಗೂ ಶುಭಕಾಮನೆಗಳನ್ನು ತಿಳಿಸಿದ್ದಾರೆ. ಮೈಸೂರು ವಿವಿ ಹೊಸ ಆವಿಷ್ಕಾರ, ಶೈಕ್ಷಣಿಕ ಸಂಕಲ್ಪಗಳಿಗೆ ಪ್ರೇರಣಾದಾಯಿ ಆಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ದೇಶಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಪದವಿಯ ಜೊತೆಗೆ ವಿದ್ಯಾರ್ಥಿಗಳು ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಹೊತ್ತುಕೊಳ್ಳಬೇಕಿದೆ ಎಂದು ಅವರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡದ ಖ್ಯಾತ ಬರಹಗಾರ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಹೇಳಿದ ಶಿಕ್ಷಣದ ಮಹತ್ವದ ಬಗ್ಗೆಯೂ ಮೋದಿ ಪ್ರಸ್ತಾಪಿಸಿದ್ದಾರೆ. ಮೈಸೂರಿನ ಅಭಿವೃದ್ಧಿಗೆ ಕೊಡುಗೆ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಸ್ಮರಿಸಿದ್ದಾರೆ.
ಜೊತೆಗೆ ದೇಶದಲ್ಲಿ ಕೊರೋನಾ ಸೋಂಕು ಹಬ್ಬುತ್ತಿರುವ ಕಾರಣದಿಂದ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಇದೆಲ್ಲಕ್ಕೂ ಒಪ್ಪಿಕೊಂಡ ಜನತೆ ಉತ್ಸಾಹದಿಂದಲೇ ಹಬ್ಬ ಹರಿದಿನಗಳನ್ನು ಆಚರಣೆ ಮಾಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕರ್ನಾಟಕದಲ್ಲಿ ಈ ಬಾರಿ ಸುರಿದ ಭಾರೀ ಮಳೆಗೆ ಹಬ್ಬಗಳ ಆಚರಣೆ ಮಂಕಾಗಿದೆ. ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಕುಟುಂಬಗಳಿಗೆ ಸಾಂತ್ವನ ತಿಳಿಸಿರುವ ನಮೋ, ಕೇಂದ್ರ, ರಾಜ್ಯ ಸರ್ಕಾರಗಳೆರಡೂ ಪರಿಹಾರ ಒದಗಿಸಲು ಪ್ರಯತ್ನ ಮಾಡುವ ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.