ಬೆಂಗಳೂರು: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ನಾಲ್ಕು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ 5.8 ಕಿಮೀ ಎತ್ತರದಲ್ಲಿ ಸಕ್ರ್ಯೂಲೇಶನ್ ಇದೆ. ಇದರಿಂದಾಗಿ ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತದಿಂದ ಅಕ್ಟೋಬರ್ 19-23 ರ ವರೆಗೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೆಚ್ಚು ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ 20-23 ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಮಂಡ್ಯ, ಬೀದರ್, ಬೆಂಗಳೂರು, ಗದಗ, ರಾಮನಗರ, ಚಿಕ್ಕ ಬಳ್ಳಾಪುರ ಜಿಲ್ಲೆಗಳಲ್ಲಿ ಅಕ್ಟೋಬರ್ 19-22ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಇಂದು, ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಎಚ್ಚರ ವಹಿಸುವಂತೆ ಸೂಚಿಸಿದೆ.
ಭಾರೀ ಮಳೆಯಾಗುವ ಸಂಭವವಿರುವುದರಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆಯೂ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.