ಮೈಸೂರು: ಮಾನಸ ಗಂಗೋತ್ರಿ ಯ (ಮೈಸೂರು ವಿವಿ) ಯ 100 ನೇ ಘಟಿಕೋತ್ಸವ ಕಾರ್ಯಕ್ರಮ ಇಂದು ಕ್ರಾಫರ್ಡ್ ಭವನದಲ್ಲಿ ನಡೆಯಿತು. ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಈ ಘಟಿಕೋತ್ಸವದ ಪ್ರಮುಖ ಭಾಗವಾಗಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ, ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಪ್ರದಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಯ ಹಲವು ವಿದ್ಯಾರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿ, ಪಿಎಚ್ಡಿ ಪ್ರದಾನಿಸಲಾಯಿತು.
ಕೊರೋನಾ ಮುನ್ನೆಚ್ಚರಿಕೆಗಳನ್ನು ಅನುಸರಿಸಿ ಆಯೋಜಿಸಲಾಗಿದ್ದ ಈ ಸರಳ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.