ಬೆಂಗಳೂರು: ಕಳೆದ 19 ದಿನಗಳಿಂದ ರಾಜ್ಯದಲ್ಲಿ ಕೊರೋನಾ ಸೋಂಕು ಮಾದರಿ ಪರೀಕ್ಷೆಯ ಪ್ರಮಾಣ ಹೆಚ್ಚಿಸಲಾಗಿದ್ದು, ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ.
ತಜ್ಞರ ಅಭಿಪ್ರಾಯದಂತೆ, ಕೊರೋನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾದರಿ ಪರೀಕ್ಷೆಗಳು ಮುಖ್ಯ ಪಾತ್ರ ವಹಿಸುತ್ತವೆ. ಕೊರೋನಾ ಪರೀಕ್ಷೆಯನ್ನು ಹೆಚ್ಚಿಸಿದಲ್ಲಿ ಸೋಂಕು ನಿಯಂತ್ರಣ, ಸೋಂಕು ಹರಡಿದ್ದರೆ ಅದಕ್ಕೆ ಸೂಕ್ತ ಚಿಕಿತ್ಸೆ, ಶಮನಗೊಳಿಸಲು ಕ್ರಮ ಕೈಗೊಳ್ಳುವಲ್ಲಿಯೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿದೆ. ಇದರಿಂದ ಕೊರೋನಾ ವ್ಯಾಪಕವಾಗಿ ಹರಡುವುದು ಮತ್ತು ಸೋಂಕು ಶಮನ ಮಾಡಲಾದ ಪ್ರದೇಶದಲ್ಲಿ ಮತ್ತೆ ಸೋಂಕು ಹರಡುವುದನ್ನು ತಡೆಯಬಹುದಾಗಿದೆ. ಇದರಿಂದ ಸೋಂಕಿನ ಪ್ರಮಾಣ ಇಳಿಕೆಯಾಗುವ ಎಲ್ಲಾ ಸಾಧ್ಯತೆಗಳೂ ಇವೆ.
ಸೋಂಕು ನಿವಾರಣೆಗೆ ಸಂಬಂಧಿಸಿದಂತೆ ರಾಜ್ಯದ ಆರೋಗ್ಯ ಇಲಾಖೆ ಪರೀಕ್ಷೆಗಳನ್ನು ಹೆಚ್ಚಿಸುವ ಮೂಲಕ ಸೋಂಕು ಶಮನಕ್ಕೆ ಪ್ರಯತ್ನ ನಡೆಸುತ್ತಿದೆ. 19 ದಿನಗಳಿಂದೀಚೆಗೆ ನಿತ್ಯ 1 ಲಕ್ಷ ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಪ್ರಕರಣಗಳು ಹೆಚ್ಚಾಗದಂತೆ ಕ್ರಮ ವಹಿಸಿದೆ. ಇದರಿಂದ ಅರ್ಧದಷ್ಟು ಪ್ರಕರಣಗಳು ಕಡಿಮೆಯಾಗುತ್ತಿರುವುದಾಗಿಯೂ ಆರೋಗ್ಯ ಇಲಾಖೆ ಮಾಹಿತಿ ನೀಡಿವೆ.
ಕಳೆದ ಅಕ್ಟೋಬರ್ ತಿಂಗಳಿನಿಂದ ರಾಜ್ಯದಲ್ಲಿ 1 ಲಕ್ಷ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರಿಣಾಮ ಸೋಂಕಿತರ ಪ್ರಮಾಣ, ಸೋಂಕು ವ್ಯಾಪಿಸುವ ಪ್ರಮಾಣ ಮತ್ತು ಸಾವಿನ ಪ್ರಮಾಣ ಸಹ ಕಡಿಮೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.