
ನವದೆಹಲಿ: ವಿಶ್ವದಾದ್ಯಂತ ಕರೋನವೈರಸ್ ಮಹಾಮಾರಿ ಅಟ್ಟಹಾಸ ಕಡಿಮೆಯಾಗುತ್ತಿಲ್ಲ. ಈ ಸಂದರ್ಭದಲ್ಲಿ ಶ್ರೀಮಂತ ಉದ್ಯಮಿ ಬಿಲ್ ಗೇಟ್ಸ್ ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. 2021ರ ಬೇಸಿಗೆಯ ವೇಳೆಗೆ ಕೋವಿಡ್-19 ಲಸಿಕೆ ಲಭ್ಯವಾಗಲಿದೆ ಎಂದಿದ್ದಾರೆ.
ಕೋವಿಡ್-19 ಲಸಿಕೆ ವಿಶ್ವವು ಅತ್ಯಂತ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಪಡಿಸಿದ ಲಸಿಕೆ ಆಗಲಿದೆ ಎಂದು ಅವರು ಹೇಳಿದ್ದಾರೆ.
ಗ್ರ್ಯಾಂಡ್ ಚಾಲೆಂಜಸ್ ಆನ್ವಲ್ ಮೀಟಿಂಗ್ 2020 ಅನ್ನು ವರ್ಚುವಲ್ ಆಗಿ ಉದ್ದೇಶಿಸಿ ಮಾತನಾಡಿದ ಅವರು, ಜಾಗತಿಕ ಸಮುದಾಯವು ಮುಂದೆ ಉದ್ಭವಿಸಬಹುದಾದ ಯಾವುದೇ ಸಾಂಕ್ರಾಮಿಕವನ್ನು ನಿರ್ವಹಿಸಲು ಹೆಜ್ಜೆ ಮುಂದಿಡಬೇಕು ಮತ್ತು ಭವಿಷ್ಯದ ಯಾವುದೇ ಸಾಂಕ್ರಾಮಿಕವನ್ನು ಎದುರಿಸಲು ವೇದಿಕೆಯನ್ನು ನಿರ್ಮಾಣ ಮಾಡುವುದು ಅತ್ಯಗತ್ಯವಾಗಿದೆ ಎಂದಿದ್ದಾರೆ.
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತದ ಸಂಶೋಧನೆ ಮತ್ತು ಉತ್ಪಾದನಾ ಸಾಮರ್ಥ್ಯಗಳು ಮಹತ್ವದ ಪಾತ್ರವನ್ನು ನಿಭಾಯಿಸಲಿದೆ ಎಂದು ಗೇಟ್ ಹೇಳಿದ್ದಾರೆ.
ಭಾರತ ಅತ್ಯಂತ ಸ್ಫೂರ್ತಿದಾಯಕವಾಗಿದ್ದು, ಕಳೆದ ಎರಡು ದಶಕಗಳಿಂದ ತನ್ನ ಜನರ ಆರೋಗ್ಯವನ್ನು ಸುಧಾರಿಸಲು ಅದು ಹಲವಾರು ಕ್ರಮಗಳನ್ನು ಕೈಗೊಂಡಿದೆ. ದೊಡ್ಡಪ್ರಮಾಣದಲ್ಲಿ ಲಸಿಕೆ ಉತ್ಪಾದನೆಯ ವಿಷಯದಲ್ಲಿ, ಕರೋನವೈರಸ್ ವಿರುದ್ಧದ ಹೋರಾಟದಲ್ಲಿ ಭಾರತದ ಸಂಶೋಧನೆ ಮತ್ತು ಉತ್ಪಾದನಾ ಸಾಮರ್ಥ್ಯ ಅತ್ಯಂತ ನಿರ್ಣಾಯಕವಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


