ಶಿವಮೊಗ್ಗ: ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ನಿವೇಶನ ಒದಗಿಸುವುದು, ಹಂತ ಹಂತವಾಗಿ ಗೃಹ ನಿರ್ಮಾಣ ಮಾಡಿ ಕೊಡುವುದು ರಾಜ್ಯ ಸರ್ಕಾರ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ಜಿಲ್ಲೆಯ ಶಿಕಾರಿಪುರದಲ್ಲಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿ ಮಾತನಾಡಿದರು. ಎಲ್ಲರಿಗೂ ಮನೆಯ ಹಕ್ಕು ಪತ್ರಗಳನ್ನು ತಲುಪಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಇದಕ್ಕಾಗಿ ಮಧ್ಯವರ್ತಿಗಳಿಗೆ ಲಂಚ ನೀಡಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಹಾಗೆಯೇ, ಯಾರಾದರೂ ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ಜಿಲ್ಲಾಧಿಕಾರಿಗಳಿಗೆ ದೂರು ನೀಡುವಂತೆಯೂ ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ನಿವೇಶನ ರಹಿತರಿಗೆ ಹಕ್ಕುಪತ್ರ, ರೈತರಿಗೆ ಕೃಷಿ ಯಂತ್ರೋಪಕರಣ, ಆಕಸ್ಮಿಕವಾಗಿ ಮರಣ ಹೊಂದಿದ ರೈತರಿಗೆ ಪರಿಹಾರ ಧನ, ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಿದರು.
ಮುಖ್ಯಮಂತ್ರಿ @BSYBJP ರವರು ಇಂದು ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿದರು
ಸಂಸದ @BYRBJP, ಎಂಎಡಿಬಿ ಅಧ್ಯಕ್ಷ @KSGBJP, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು. pic.twitter.com/mT62RiCAYq
— CM of Karnataka (@CMofKarnataka) October 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.