ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಅಸ್ಸಾಂನಲ್ಲಿ ದೇಶದ ಮೊಟ್ಟಮೊದಲ ಮಲ್ಟಿ-ಮೋಡಲ್ ಲಾಜಿಸ್ಟಿಕ್ ಪಾರ್ಕ್ಗೆ ಅಡಿಪಾಯ ಹಾಕಿದರು. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಮತ್ತು ಕೇಂದ್ರ ರಾಜ್ಯ ಖಾತೆ ಸಚಿವರಾದ ಡಾ.ಜಿತೇಂದ್ರ ಸಿಂಗ್, ಜನರಲ್ (ನಿವೃತ್ತ) ವಿ.ಕೆ.ಸಿಂಗ್ ಮತ್ತು ಅಸ್ಸಾಂನ ಹಲವಾರು ಮಂತ್ರಿಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಗಡ್ಕರಿ, ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಲಾಜಿಸ್ಟಿಕ್ ಪಾರ್ಕ್ ಈ ಪ್ರದೇಶದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು. ಕಳೆದ ಆರು ವರ್ಷಗಳಲ್ಲಿ ಈಶಾನ್ಯದಲ್ಲಿ ರಸ್ತೆ ಜಾಲವನ್ನು ಸಾಕಷ್ಟು ಸುಧಾರಿಸಲಾಗಿದೆ ಎಂದಿದ್ದಾರೆ.
ಬೊಂಗೈಗಾಂವ್ ಜಿಲ್ಲೆಯಲ್ಲಿ 700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಪಾರ್ಕ್ ಅಸ್ಸಾಂ ಮತ್ತು ಈಶಾನ್ಯದ ಇತರ ಭಾಗಗಳಿಗೆ ವಾಯು, ರಸ್ತೆ, ರೈಲು ಮತ್ತು ಜಲಮಾರ್ಗಗಳಿಗೆ ನೇರ ಸಂಪರ್ಕವನ್ನು ಒದಗಿಸುತ್ತದೆ. ಇದು 20 ಲಕ್ಷ ಜನರಿಗೆ ಉದ್ಯೋಗ ನೀಡಲಿದೆ. ಇದನ್ನು ಕೇಂದ್ರದ ಭರತಮಾಲಾ ಪರಿಯೋಜನಾ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್ನ ನಿಧಿಯನ್ನು ರಸ್ತೆ ಮತ್ತು ರೈಲ್ವೆ ಸಂಪರ್ಕ ಮತ್ತು ಕಟ್ಟಡ ಮತ್ತು ಮೂಲಸೌಕರ್ಯ ಕಾರ್ಯಗಳಿಗೆ ಖರ್ಚು ಮಾಡಲಾಗುತ್ತದೆ. ಯೋಜನೆಯನ್ನು ಕಾರ್ಯಗತಗೊಳಿಸಲು ಒಪ್ಪಂದ ಪತ್ರಕ್ಕೆ ಸಹಿ ಹಾಕಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.