ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೊಸ ಡಿಆರ್ಡಿಒ ಖರೀದಿ ಕೈಪಿಡಿ -2020ಗೆ ಅನುಮೋದನೆ ನೀಡಿದ್ದಾರೆ.
ಸ್ಟಾರ್ಟ್- ಅಪ್ಗಳು ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ ಸೇರಿದಂತೆ ಭಾರತೀಯ ಉದ್ಯಮವನ್ನು ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಯಲ್ಲಿ ಹೆಚ್ಚು ಭಾಗವಹಿಸುವಂತೆ ಇದು ಉತ್ತೇಜಿಸುತ್ತದೆ ಮತ್ತು ರಕ್ಷಣೆಯಲ್ಲಿ ಸ್ವಾವಲಂಬನೆಯ ಗುರಿಯನ್ನು ಸಾಧಿಸಲು ಸಹಕಾರಿಯಾಗಲಿದೆ ಎಂದು ರಕ್ಷಣಾ ಸಚಿವರ ಕಚೇರಿ ಟ್ವೀಟ್ ನಲ್ಲಿ ತಿಳಿಸಿದೆ.
ಹೊಸ ಡಿಆರ್ಡಿಒ ಖರೀದಿ ಕೈಪಿಡಿ ಪ್ರಕ್ರಿಯೆಗಳನ್ನು ಸರಳೀಕರಿಸುವ ಮೂಲಕ ಮತ್ತು ವಿನ್ಯಾಸ ಮತ್ತು ಅಭಿವೃದ್ಧಿ ಚಟುವಟಿಕೆಗಳಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಖಾತರಿಪಡಿಸುವ ಮೂಲಕ ಸ್ಥಳೀಯ ರಕ್ಷಣಾ ಉದ್ಯಮಕ್ಕೆ ಅನುಕೂಲ ಮಾಡಿಕೊಡಲಿದೆ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಕನಸನ್ನು ನನಸು ಮಾಡಲು ಇದು ಸಹಾಯ ಮಾಡುತ್ತದೆ ಎಂದಿದ್ದಾರೆ.
Raksha Mantri Shri @rajnathsingh has approved a new @DRDO_India Procurement Manual (PM-2020) to encourage more participation of the Indian Industry including startups and MSMEs in Research & Development activity and also to achieve the goal of self reliance in Defence.
— रक्षा मंत्री कार्यालय/ RMO India (@DefenceMinIndia) October 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.