ನವದೆಹಲಿ: ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಹಲವಾರು ಮಹತ್ವದ ಮೈಲಿಗಲ್ಲುಗಳನ್ನು ದಾಟಿದೆ. ಕಳೆದ 24 ಗಂಟೆಗಳಲ್ಲಿ ಹೊಸ ದೃಢಪಡಿಸಿದ ಪ್ರಕರಣಗಳು ಸುಮಾರು ಮೂರು ತಿಂಗಳಲ್ಲಿ ಮೊದಲ ಬಾರಿಗೆ 50 ಸಾವಿರಕ್ಕಿಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 46,790 ಹೊಸ ಪ್ರಕರಣಗಳು ದಾಖಲಾಗಿವೆ.
ಪ್ರತಿದಿನ ಹೆಚ್ಚಿನ ಸಂಖ್ಯೆಯ ಕೋವಿಡ್ ರೋಗಿಗಳು ಚೇತರಿಸಿಕೊಳ್ಳುತ್ತಿರುವುದರಿಂದ ಮತ್ತು ಮರಣ ಪ್ರಮಾಣದಲ್ಲಿ ನಿರಂತರ ಕುಸಿತದೊಂದಿಗೆ ಸಕ್ರಿಯ ಪ್ರಕರಣ ಕಡಿಮೆಯಾಗುತ್ತಿದೆ.
ಸಕ್ರಿಯ ಪ್ರಕರಣಗಳ ಶೇಕಡಾವಾರು 10% ಕ್ಕಿಂತ ಕಡಿಮೆಯಾಗಿದೆ. ದೇಶದ ಒಟ್ಟು ಸಕಾರಾತ್ಮಕ ಪ್ರಕರಣಗಳು 7.5 ಲಕ್ಷಕ್ಕಿಂತ ಕಡಿಮೆ ಮತ್ತು ಒಟ್ಟು ಪ್ರಕರಣಗಳಲ್ಲಿ ಕೇವಲ 9.85% ಅನ್ನು ಮಾತ್ರ ಒಳಗೊಂಡಿವೆ.
ದೇಶಾದ್ಯಂತದ ಸಮಗ್ರ ಮತ್ತು ಉನ್ನತ ಮಟ್ಟದ ಪರೀಕ್ಷೆ, ತ್ವರಿತ ಮತ್ತು ಪರಿಣಾಮಕಾರಿ ಟ್ರ್ಯಾಕಿಂಗ್, ತ್ವರಿತವಾಗಿ ಆಸ್ಪತ್ರೆಗೆ ದಾಖಲಿಸುವಿಕೆ ಮತ್ತು ಸ್ಟ್ಯಾಂಡರ್ಡ್ ಟ್ರೀಟ್ಮೆಂಟ್ ಪ್ರೊಟೊಕಾಲ್ ಅನ್ನು ಪರಿಣಾಮಕಾರಿಯಾಗಿ ಅನುಸರಿಸುವ ಕೇಂದ್ರದ ಕಾರ್ಯತಂತ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಯೋಗ ಫಲಿತಾಂಶ ಇದು ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಚೇತರಿಸಿಕೊಂಡ ಒಟ್ಟು ಪ್ರಕರಣಗಳು 67 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳು ಮತ್ತು ಚೇತರಿಸಿಕೊಂಡ ಪ್ರಕರಣಗಳ ನಡುವಿನ ಅಂತರ ನಿರಂತರವಾಗಿ ಹೆಚ್ಚುತ್ತಿದೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 69,720 ರೋಗಿಗಳು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಷ್ಟ್ರೀಯ ಚೇತರಿಕೆ ದರ 88.63% ಕ್ಕೆ ಏರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.