ಮುಂಬಯಿ: ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥ ರೇಖಾ ಶರ್ಮ ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಮಂಗಳವಾರ ಭೇಟಿಯಾಗಿದ್ದಾರೆ. ಹೆಚ್ಚುತ್ತಿರುವ ‘ಲವ್ ಜಿಹಾದ್’ ಪ್ರಕರಣದ ಬಗ್ಗೆ ಅವರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಮಹಾರಾಷ್ಟ್ರದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಶರ್ಮಾ ಅವರು ರಾಜ್ಯಪಾಲರ ಗಮನಕ್ಕೆ ತಂದಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ ಅವರು ಮಹಿಳಾ ಸುರಕ್ಷತೆಯ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅಯೋಗ, ” ರೇಖಾ ಶರ್ಮಾ ಅವರು ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾದರು ಮತ್ತು ಕೋವಿಡ್ ಕೇಂದ್ರಗಳಲ್ಲಿ ಮಹಿಳಾ ರೋಗಿಗಳ ವಿರುದ್ಧದ ಕಿರುಕುಳ ಮತ್ತು ಅತ್ಯಾಚಾರ ಮತ್ತು ಲವ್ ಜಿಹಾದ್ ಪ್ರಕರಣಗಳ ಏರಿಕೆ ಸೇರಿದಂತೆ ರಾಜ್ಯದ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು” ಎಂದಿದೆ.
Our Chairperson @sharmarekha met with Shri Bhagat Singh Koshyari, His Excellency, Governor of Maharashtra & discussed issues related to #womensafety in the state including defunct One Stop Centres, molestation & rape of women patients at #COVID centres & rise in love jihad cases pic.twitter.com/JBiFT477IU
— NCW (@NCWIndia) October 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.