ಕಲಬುರ್ಗಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನರು ಜಲ ಸಂಕಷ್ಟ ಎದುರಿಸುವಂತಾಗಿದ್ದು ,ಈ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೆಲವು ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಹಾಗೂ ಪ್ರವಾಹದಿಂದ ಕಲಬುರ್ಗಿ, ವಿಜಯಪುರ, ಗದಗ, ಬೆಳಗಾವಿ ಮೊದಲಾದೆಡೆಗಳಲ್ಲಿ ಭಾರೀ ಪ್ರವಾಹ ಉಂಟಾಗಿದೆ. ಅಪಾರ ಹಾನಿಯೂ ಸಂಭವಿಸಿದೆ. ಅನೇಕ ಜನರು ಮನೆ ಮಠ ಕಳೆದುಕೊಳ್ಳುವಂತಾಗಿದೆ. ಕೃಷಿ ನಾಶವಾಗಿದೆ. ಸಂತ್ರಸ್ಥ ಜನರು ತಾತ್ಕಾಲಿಕ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಪರಿಸ್ಥಿತಿಯ ಅವಲೋಕನ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಸಂತ್ರಸ್ಥ ಜನತೆಗೆ ಪರಿಹಾರ ಒದಗಿಸಿಕೊಡುವ ಸಂಬಂಧ ಸಿಎಂ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಬಳಿಕ ಕೇಂದ್ರ ಸರ್ಕಾರದ ಜೊತೆಗೂ ಯಡಿಯೂರಪ್ಪ ಫೋನ್ ಮೂಲಕ ಮಾತುಕತೆ ನಡೆಸಿದ್ದಾರೆ. ಉತ್ತರ ಕರ್ನಾಟಕದ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ಕೇಂದ್ರ ಸರ್ಕಾರ ಸೂಕ್ತ ಪರಿಹಾರ ಒದಗಿಸಿಕೊಡುವ ಭರವಸೆಯನ್ನು ನೀಡಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.