ಬೆಂಗಳೂರು: ಕೊರೋನಾ ಸಂಕಷ್ಟದ ಕಾರಣದಿಂದಾಗಿ ರಾಜ್ಯದಲ್ಲಿ ಆನ್ಲೈನ್ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಈ ಪದ್ಧತಿಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ.
ಆನ್ಲೈನ್ ತರಗತಿಗಳಿಂದಾಗಿ ಮಕ್ಕಳ ಕಣ್ಣುಗಳಿಗೆ ತೊಂದರೆಯಾಗಬಹುದು, ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂಬೆಲ್ಲಾ ವಿಚಾರಗಳು ಸಾರ್ವಜನಿಕ ವಲಯದಲ್ಲಿ, ಮಾಧ್ಯಮಗಳಲ್ಲಿ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಆನ್ಲೈನ್ ತರಗತಿಗಳನ್ನು ನಡೆಸುವ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳನ್ನು ತಜ್ಞರು ಈಗಾಗಲೇ ತಿಳಿಸಿದ್ದಾರೆ. ಈ ಎಲ್ಲಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಆನ್ಲೈನ್ ತರಗತಿಗಳನ್ನು ನಡೆಸುವಂತೆ ಶಾಲೆಗಳಿಗೆ ಸಚಿವರು ಈ ಆದೇಶದಲ್ಲಿ ತಿಳಿಸಿದ್ದಾರೆ.
ಕೊರೋನಾ ಕಾರಣದಿಂದ ರಾಜ್ಯದಲ್ಲಿ ಇನ್ನೂ ಶಾಲಾರಂಭವಾಗಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಶಾಲೆಗಳಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಲು ಅನುಮತಿ ನೀಡಲಾಗಿತ್ತು. ಇದೀಗ ಇದರಿಂದ ವಿದ್ಯಾರ್ಥಿಗಳ ಕಣ್ಣುಗಳಿಗೆ ಹಾನಿಯಾಗುತ್ತದೆ ಎಂಬ ಸುದ್ದಿ ತಿಳಿದು ಬಂದ ಹಿನ್ನೆಲೆಯಲ್ಲಿ ಸಚಿವರು ಈ ಕ್ರಮಕ್ಕೆ ಮುಂದಾಗಿದ್ದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.