ಬೆಂಗಳೂರು: ಉಪನ್ಯಾಸಕರು, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ತಕ್ಷಣ ಆರಂಭ ಮಾಡುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ ಬೆನ್ನಲ್ಲೇ, ಈ ಸಂಬಂಧ ಮಾಹಿತಿಯೊಂದನ್ನು ಸಚಿವ ಸುರೇಶ್ ಕುಮಾರ್ ಅವರು ಹಂಚಿಕೊಂಡಿದ್ದಾರೆ.
ನವೆಂಬರ್ 5 ರಿಂದ ತೊಡಗಿದಂತೆ ಶಿಕ್ಷಕರ ವರ್ಗಾವಣಾ ಕಾರ್ಯವನ್ನು ಆರಂಭ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಳೆದ ಸಾಲಿನಲ್ಲಿ ಹೆಚ್ಚುವರಿ ಮತ್ತು ಕಡ್ಡಾಯ ವರ್ಗಾವಣಾ ಪ್ರಕ್ರಿಯೆಗೆ ಒಳಗಾದ ಶಿಕ್ಷಕರಿಗೆ ಈ ಹಿಂದೆ ಭರವಸೆ ನೀಡಿದಂತೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ಸಂಬಂಧ ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿದೆ. ಈ ಸಂಬಂಧ ಇಲಾಖೆ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.