ನವದೆಹಲಿ: ಭಾರತೀಯ ಸೇನೆಯಲ್ಲಿ ಮಹತ್ವದ ಬದಲಾವಣೆಗಳು ಪ್ರಸ್ತುತ ನಡೆಯುತ್ತಿದೆ. ಇತ್ತೀಚಿಗಷ್ಟೇ ರಕ್ಷಣಾ ಪಡೆಗಳ ಮುಖ್ಯಸ್ಥರನ್ನು ನೇಮಕ ಮಾಡಲಾಗಿದ್ದು, ಅದರ ಬಳಿಕ ಮತ್ತೊಂದು ದೊಡ್ಡ ಮಿಲಿಟರಿ ಸುಧಾರಣೆಗೆ ಸರ್ಕಾರ ಮುಂದಾಗಿದೆ. ಅದೇನೆಂದರೆ ಇಂಟಿಗ್ರೇಟೆಡ್ ಥಿಯೇಟರ್ ಕಮಾಂಡ್.
ಮೂರು ಸೇನಾಪಡೆಗಳ ನಡುವೆ ಸಮನ್ವಯವನ್ನು ಸಾಧಿಸುವ ಸಲುವಾಗಿ ಇಂಟಿಗ್ರೇಟೆಡ್ ಥಿಯೇಟರ್ ಕಮಾಂಡ್ ಮಹತ್ವದ್ದಾಗಿದೆ ಎಂದು ಭೂಸೇನೆ ಮುಖ್ಯಸ್ಥ ಎಂಎಂ ನರವಾಣೆ ಹೇಳಿದ್ದಾರೆ.
ಭೌಗೋಳಿಕೆಗೆ ಅನುಗುಣವಾಗಿ ಎಲ್ಲಾ ಸಶಸ್ತ್ರ ಪಡೆಗಳ ನಿಯಂತ್ರಣವನ್ನು ಸಂಯೋಜಿಸುವ ಥಿಯೇಟರ್ ಕಮಾಂಡ್ಗಳನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ಚಿಂತನಶೀಲ ಮತ್ತು ಉತ್ತಮವಾಗಿ ಪರಿಗಣಿಸಬೇಕಾದ ಅಗತ್ಯವಿದೆ ಮತ್ತು ಅದು ಫಲಪ್ರದವಾಗಲಿದೆ “ಎಂದು ಜನರಲ್ ನರವಾಣೆ ಹೇಳಿದ್ದಾರೆ.
ಸಿಕಂದರಾಬಾದ್ನ ಕಾಲೇಜ್ ಆಫ್ ಡಿಫೆನ್ಸ್ ಮ್ಯಾನೇಜ್ಮೆಂಟ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥರು, ರಾಷ್ಟ್ರೀಯ ಭದ್ರತಾ ಹಿತಾಸಕ್ತಿಗಳು ಅತ್ಯಂತ ಮಹತ್ವದ್ದಾಗಿರುವುದರಿಂದ ಎಲ್ಲರೂ ಒಗ್ಗಟ್ಟಿನಿಂದ ಮತ್ತು ವಿಶ್ವಾಸದಿಂದ ಕೆಲಸ ಮಾಡುವ ಅವಶ್ಯಕತೆಯಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.