ನವದೆಹಲಿ: ಭಾರತ್ ಬಯೋಟೆಕ್ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಜಂಟಿಯಾಗಿ ಅಭಿವೃದ್ಧಿ ಮಾಡುತ್ತಿರುವ ಕೊರೋನಾ ವ್ಯಾಕ್ಸಿನ್ ಕೋವ್ಯಾಕ್ಸಿನ್ನ ಮೂರನೇ ಹಂತದ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ ನೀಡನೆ.
ಕಳೆದ ಅಕ್ಟೋಬರ್ 2 ರಂದು ಹೈದರಾಬಾದ್ ಮೂಲದ ಲಸಿಕೆ ತಯಾರಿಸುವ ಸಂಸ್ಥೆ ಈ ಲಸಿಕೆಯ ಮೂರನೇ ಹಂತದ ಕ್ಲಿನಿಕ್ ಪ್ರಯೋಗಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ಕಂಟ್ರೋಲರ್ ಆಫ್ ಇಂಡಿಯಾದಿಂದ ಅನುಮತಿ ಕೇಳಿತ್ತು. ಈ ಅರ್ಜಿಯಲ್ಲಿ ದೇಶದ ಪ್ರಮುಖ ನಗರಗಳಾದ ನವದೆಹಲಿ, ಮುಂಬೈ, ಪಾಟ್ನಾ, ಲಕ್ನೋ ಗಳನ್ನೊಳಗೊಂಡಂತೆ 10 ರಾಜ್ಯಗಳ 19 ನಗರಗಳಲ್ಲಿ ಸುಮಾರು 28,500 ಮಂದಿ 18 ವರ್ಷ ಮೇಲ್ಪಟ್ಟವರ ಮೇಲೆ ಈ ಲಸಿಕೆ ಪ್ರಯೋಗ ನಡೆಸುವುದಾಗಿಯೂ ಸಂಸ್ಥೆ ಮಾಹಿತಿ ನೀಡಿತ್ತು.
ಭಾರತದಲ್ಲಿ ಕೋವ್ಯಾಕ್ಸಿನ್ನ ಜೊತೆಗೆ ಜೈಡಸ್ ಕ್ಯಾಡಿಲ್ ಲಿ. ನ ಕೊರೋನಾ ಲಸಿಕೆಯೂ ಎರಡನೇ ಹಂತದ ಪ್ರಯೋಗದಲ್ಲಿದೆ. ಜೊತೆಗೆ ಪುಣೆಯ ಸೆರಂ ಕಂಪೆನಿಯ ಲಸಿಕೆಯೂ ಎರಡು ಮತ್ತು ಮೂರನೇ ಹಂತದ ಲಸಿಕೆ ಪರೀಕ್ಷೆಯನ್ನು ದೇಶದಲ್ಲಿ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.