ಬೆಂಗಳೂರು: ಕೊರೋನಾ ನಿಯಂತ್ರಣ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮೊದಲಾದವುಗಳನ್ನು ಮೀರಿದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಈ ಸಂಬಂಧ ಸಾಯಿದತ್ತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಬಳಿಕ ಸರ್ಕಾರಕ್ಕೆ ಈ ಸೂಚನೆ ನೀಡಿದೆ.
ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 35 ರಷ್ಟು ಪ್ರತಿಭಟನೆಯಲ್ಲಿ ಕೊರೋನಾ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದನ್ನು ಮರೆತು ಈ ಪ್ರತಿಭಟನೆಗಳನ್ನು ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾಯಿದತ್ತ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸೆ. 25 ರಂದು ನಡೆದ ಪ್ರತಿಭಟನೆಯಲ್ಲಿ ಸಹ ಕೊರೋನಾ ನಿಯಂತ್ರಣ ಕ್ರಮಗಳು ಅನುಸರಿಸಲಾಗಿಲ್ಲ. ಈ ಪ್ರತಿಭಟನೆಯ ಆಯೋಜಕರಲ್ಲಿ ಒಬ್ಬರಾದ ಮಾರುತಿ ಮಾನ್ಪಡೆ ಅವರು ಕೊರೋನಾದಿಂದಲೇ ಮೃತಪಟ್ಟಿದ್ದಾರೆ ಎಂದೂ ಅರ್ಜಿದಾರರು ಕೋರ್ಟ್ ಗಮನಕ್ಕೆ ತಂದಿದ್ದಾರೆ.
ಈ ಸಂಬಂಧ ಸರ್ಕಾರಕ್ಕೆ ಸೂಚನೆ ನೀಡಿರುವ ಹೈಕೋರ್ಟ್, ಪ್ರತಿಭಟನೆಯ ಚಿತ್ರಗಳಲ್ಲಿ ಹಲವು ಜನರು ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಇರುವುದು ಕಂಡುಬಂದಿದೆ. ಇದು ಕೊರೋನಾ ಹರಡುವುದಕ್ಕೂ ಕಾರಣವಾಗಿದೆ. ಇಂತಹ ವಿಚಾರ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಸಂಬಂಧಿಸಿದಂತೆ ಇರುವ ಆಡಳಿತಕ್ಕೆ ತಿಳಿಸಿದೆ. ಅಲ್ಲದೆ ಇಂತಹ ದುರ್ವರ್ತನೆ ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದೂ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.