ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ಶಾಲಾ, ಕಾಲೇಜುಗಳ ಆರಂಭ ಪ್ರಕ್ರಿಯೆ ತಡವಾಗಿದೆ. ಈ ನಡುವೆಯೇ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶವೊಂದನ್ನು ಹೊರಡಿಸಿದ್ದು, ಇದರಲ್ಲಿ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದಾಖಲಾತಿ ದಿನಾಂಕವನ್ನು ವಿಸ್ತರಣೆ ಮಾಡಿರುವುದಾಗಿ ಮಾಹಿತಿ ನೀಡಿದೆ.
ವಾರ್ಷಿಕ ಪರೀಕ್ಷೆ ಪೂರಕ ಪರೀಕ್ಷೆ, ಮರು ಮೌಲ್ಯಮಾಪನ ಪ್ರಕ್ರಿಯೆಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮರು ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಹಾಯಕವಾಗುವಂತೆ ಈ ನಿರ್ಧಾರವನ್ನು ಪಿಯು ಬೋರ್ಡ್ ಪ್ರಕಟಿಸಿದೆ.
ಪ್ರಥಮ ಪಿಯುಸಿಗೆ ಅ. 27 ಮತ್ತು ದ್ವಿತೀಯ ಪಿಯುಸಿ ಸೇರ್ಪಡೆಗೆ ನವೆಂಬರ್ 3ರ ವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.