ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಇದರಿಂದಾಗಿ ಪ್ರವಾಹ, ಹಾನಿಗಳೂ ಸಂಭವಿಸಿದೆ. ಈ ನಡುವೆಯೇ ಅಕ್ಟೋಬರ್ 24-25 ರಂದು ಸಹ ರಾಜ್ಯದ ವಿವಿಧೆಡೆ ಗುಡುಗು, ಮಿಂಚಿನ ಸಹಿತ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇನ್ನೆರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕ ಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಪ್ರಮಾಣದ ಮಳೆಯಾಗಲಿದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅದರಂತೆ ಅ. 26 ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಸದ್ಯ ಮಳೆಯ ಪ್ರಮಾಣ ತಗ್ಗಿದೆ ಎಂದು ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.