ನವದೆಹಲಿ: 3019-20 ನೇ ಸಾಲಿನ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನೀಡಲಾಗಿದ್ದ ಕಾಲಾವಕಾಶವನ್ನು ಈ ವರ್ಷದ ಕೊನೆಯವರೆಗೆ ಅಂದರೆ ಡಿಸೆಂಬರ್ 31 ರ ವರೆಗೆ ವಿಸ್ತರಣೆ ಮಾಡಿ ಹಣಕಾಸು ಸಚಿವಾಲಯ ಆದೇಶಿಸಿದೆ.
ಈ ವರೆಗೂ ಯಾವ ತೆರಿಗೆದಾರರು ಲೆಕ್ಕಪತ್ರಗಳನ್ನು ಆಡಿಟ್ ಮಾಡಬೇಕಾದ ಅಗತ್ಯತೆ ಇದೆಯೋ, ಅವರಿಗೆ 2021ರ ಜ. 31ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ತೆರಿಗೆದಾರರ ಅನುಕೂಲಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕಳೆದ ಮೇ ತಿಂಗಳಲ್ಲಿ ಈ ಅವಧಿಯನ್ನು ಜುಲೈ 31 ರಿಂದ ನವೆಂಬರ್ 30ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಆದರೆ ಇದೀಗ ಈ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ಆದೇಶಿಸಿದೆ. ಆದಾಯ ತೆರಿಗೆ ರಿಟರ್ನ್ಸ್ ಅನ್ನು 2020ರ ಡಿಸೆಂಬರ್ 31ರ ವರೆಗೆ ವಿಸ್ತರಣೆ ಮಾಡುವ ಮೂಲಕ, ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಜನರಿಗೆ ಕೊಂಚ ಮಟ್ಟಿನ ನಿರಾಳತೆಯನ್ನು ಒದಗಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.