ನವದೆಹಲಿ: ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಮತ್ತು ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಟರ್ ಈಗಾಗಲೇ ಭಾರತಕ್ಕೆ ಆಗಮಿಸಿದ್ದು, ಇಂದು ಭಾರತ ಮತ್ತು ಅಮೆರಿಕ ನಡುವಿನ ಮೂರನೇ 2+2 ಸಚಿವ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.
ಈ ಸಂವಾದದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ಪ್ರಾದೇಶಿಕ ಸಹಕಾರ ಪ್ರಧಾನವಾಗಿ ಚರ್ಚಿಸಲ್ಪಡುವ ಸಾಧ್ಯತೆ ಇದೆ.
ಭಾರತ ಮತ್ತು ಚೀನಾದ ನಡುವಿನ ಉದ್ವಿಗ್ನ ಪರಿಸ್ಥಿತಿಯ ಸಂದರ್ಭದಲ್ಲಿ ಈ ಸಂವಾದ ಕಾರ್ಯಕ್ರಮ ನಡೆಯುತ್ತಿರುವುದು ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.
ಮೈಕ್ ಪಾಂಪಿಯೋ ಮತ್ತು ಮಾರ್ಕ್ ಎಸ್ಟರ್ ಸೋಮವಾರ ಭಾರತಕ್ಕೆ ಬಂದಿಳಿದಿದ್ದಾರೆ. ಅಲ್ಲದೆ ನಿನ್ನೆ ಅವರು, ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಇಂದು ಇಬ್ಬರು ಅಮೆರಿಕ ನಾಯಕರು ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಿದ್ದಾರೆ. ಬಳಿಕ ಇಬ್ಬರೂ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸಕ್ಕೆ ತೆರಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.