ವಾಷಿಂಗ್ಟನ್: ಚಂದ್ರ ಗ್ರಹದ ಮೇಲೆ ಸೂರ್ಯನ ಕಿರಣಗಳು ಬೀಳುವ ಪ್ರದೇಶದಲ್ಲಿ ನೀರಿನ ಅಂಶ ಪತ್ತೆಯಾಗಿರುವ ವಿಚಾರಗಳನ್ನು ಅಮೆರಿಕ ಮೂಲದ ಬಾಹ್ಯಾಕಾಶ ಸಂಸ್ಥೆ ನಾಸಾದ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸಂಶೋಧನಾ ಲೇಖನಗಳನ್ನು ನೇಚರ್ ಅಸ್ಟ್ರಾನಮಿಯಲ್ಲಿ ಪ್ರಕಟಿಸಲಾಗಿದೆ. ಸೋಫಿಯಾ ಟೆಲಿಸ್ಕೋಪ್ ಮುಖಾಂತರ ಚಂದ್ರನ ಮೇಲೆ ನೀರಿರುವ ಅಂಶಗಳನ್ನು ಪತ್ತೆ ಹಚ್ಚಲಾಗಿದೆ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಹಲವು ವರ್ಷಗಳ ಹಿಂದೆ ಚಂದ್ರನ ಮೇಲೆ ಏನೂ ಇಲ್ಲ. ಅದು ಸಂಪೂರ್ಣ ಶುಷ್ಕವಾಗಿದೆ ಎಂದೇ ನಂಬಲಾಗಿತ್ತು.
ಆದರೆ ಆ ಬಳಿಕ ವಿಜ್ಞಾನಿಗಳು ಬಹು ವರ್ಷಗಳ ಅಧ್ಯಯನದಿಂದ ಚಂದ್ರನಲ್ಲಿ ನೀರಿರುವ ಸಾಧ್ಯತೆಗಳನ್ನು ಕಂಡುಕೊಂಡಿದ್ದರು. ಸದ್ಯ ಈ ವಿಚಾರದ ಬಗ್ಗೆ ಮತ್ತಷ್ಟು ಸಂಶೋಧನೆ ನಡೆಸಿ ಇದೀಗ ಚಂದ್ರನ ಮೇಲ್ಮೈ ಪದರದಲ್ಲಿ ನೀರಿರುವುದನ್ನು ಅವರು ಕಂಡುಕೊಂಡಿದ್ದಾರೆ. ನಿರೀಕ್ಷಿತ ಪ್ರಮಾಣಕ್ಕಿಂತ ಅಧಿಕ ಪ್ರಮಾಣದಲ್ಲಿ ನೀರಿರಬಹುದು ಎಂಬ ಸಾಧ್ಯತೆಯನ್ನು ಸಹ ಅವರು ತಿಳಿಸಿದ್ದಾರೆ. ಈ ಬಗ್ಗೆ ಕೆಮಿಕಲ್ ಸಾಕ್ಷ್ಯ ಸಹ ದೊರೆತಿದೆ ಎಂದು ಅವರು ತಿಳಿಸಿದ್ದಾರೆ. ಈ ನೀರಿನ ಬಳಕೆಗೆ ಸಂಬಂಧಿಸಿದಂತೆ ಸಹ ಅಧ್ಯಯನ ನಡೆಸುತ್ತಿರುವುದಾಗಿ ನಾಸಾ ಸಂಸ್ಥೆ ಮಾಹಿತಿ ನೀಡಿದೆ.
🌔 ICYMI… using our @SOFIATelescope, we found water on the Moon’s sunlit surface for the first time. Scientists think the water could be stored inside glass beadlike structures within the soil that can be smaller than the tip of a pencil. A recap: https://t.co/lCDDp7pbcl pic.twitter.com/d3CRe96LDm
— NASA (@NASA) October 26, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.