ಬೆಂಗಳೂರು: ಈಗಾಗಲೇ ಕೊರೋನಾ ಲಸಿಕೆ ಆಸ್ಟ್ರಾಜೆನೆಕಾ ಮಾರುಕಟ್ಟೆಗೆ ಬಿಡುಗಡೆಯಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಲಸಿಕೆ ತಯಾರಿಕಾ ಸಂಸ್ಥೆ ಮಾಹಿತಿ ನೀಡಿದೆ. ನವೆಂಬರ್ 2 ರಂದು ಈ ಲಸಿಕೆ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಲಸಿಕೆ ಲಭ್ಯವಾದ ಪಕ್ಷದಲ್ಲಿ ಮುಂದಿನ ವರ್ಷದ ಆರಂಭದಲ್ಲೇ ಜನರಿಗೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ ಸುಧಾಕರ್ ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಇದಕ್ಕೆ ಪೂರಕ ಸಿದ್ಧತೆಗಳನ್ನು ರಾಜ್ಯ ಸರ್ಕಾರ ನಡೆಸುತ್ತಿದೆ ಎಂದು ಹೇಳಿದ್ದಾರೆ.
ವೈರಸ್ ವಿರುದ್ಧ ಲಸಿಕೆ ಸಂಶೋಧನೆಗೆ ಪ್ರಪಂಚದ ಅನೇಕ ಔಷಧ ತಯಾರಿಕಾ ಸಂಸ್ಥೆಗಳು ಕೆಲಸ ಮಾಡುತ್ತಿದೆ. ಆಕ್ಸ್ಫರ್ಡ್ ವಿವಿ ತಯಾರಿಸಿದ ಆಸ್ಟ್ರಾಜೆನೆಕಾ ಕೊರೋನಾ ಲಸಿಕೆ ಈಗಾಗಲೇ ಎರಡು ಮತ್ತು ಮೂರನೇ ಹಂತದ ಮಾನವ ಪ್ರಯೋಗಗಳನ್ನು ಭಾರತವೂ ಸೇರಿದಂತೆ ಪ್ರಪಂಚದ ಅನೇಕ ರಾಷ್ಟ್ರಗಳಲ್ಲಿ ಪ್ರಯೋಗ ನಡೆಸಿದ್ದು ಇದರಲ್ಲಿ ಸಫಲತೆ ಕಂಡುಬಂದಿದೆ ಎಂದು ಮಾಹಿತಿ ಇದೆ.
ಇದೇ ನವೆಂಬರ್ 2 ರಂದು ಈ ಲಸಿಕೆಯನ್ನು ಮಾರುಕಟ್ಟೆಗೆ ಬಿಡುವ ಸಂಬಂಧ ಸಹ ತಯಾರಿಕಾ ಸಂಸ್ಥೆ ಮಾಹಿತಿ ನೀಡಿದೆ. ಇನ್ನು ಆಕ್ಸ್ಫರ್ಡ್ ಜೊತೆಗೆ ಭಾರತದ ಮಹಾರಾಷ್ಟ್ರ ರಾಜ್ಯದ ಪುಣೆಯ ಸೀರಂ ಔಷಧ ತಯಾರಿಕಾ ಸಂಸ್ಥೆ ಒಪ್ಪಂದ ಮಾಡಿಕೊಂಡಿದ್ದು, ದೇಶದಲ್ಲಿ ಈ ಲಸಿಕೆಯನ್ನು ಬಿಡುಗಡೆಯಾದ ಬಳಿಕ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಿ ನೀಡುವುದಾಗಿಯೂ ತಿಳಿಸಿದೆ. ಸಂಸ್ಥೆಗೆ ಕೇಂದ್ರ ಸರ್ಕಾರ ಅನುಮತಿಯನ್ನು ಸಹ ನೀಡಿದೆ.
ಈ ಹಿನ್ನೆಲೆಯಲ್ಲಿ ಔಷಧ ಬಿಡುಗಡೆಯಾದ ತಕ್ಷಣವೇ ರಾಜ್ಯಕ್ಕೂ ಅವಶ್ಯಕ ಪ್ರಮಾಣದಲ್ಲಿ ಲಸಿಕೆ ಒದಗಿಸಿಕೊಡುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದ್ದು, ರಾಜ್ಯ ಸರ್ಕಾರ ಸಹ ಲಸಿಕೆ ವಿತರಣೆಗೆ ಪೂರಕ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ಆಸ್ಟ್ರಾಜೆನೆಕಾ ಸಂಸ್ಥೆಯು ಯುಕೆಯ ಆಕ್ಸ್ಫರ್ಡ್ ಜೊತೆ ಸೇರಿ ಈ ಲಸಿಕೆ ತಯಾರಿಸಿದ್ದು, ಇದು ಪ್ರಾಯೋಗಿಕ ಪರೀಕ್ಷೆಗಳಲ್ಲಿ ಹೆಚ್ಚು ಅಡ್ಡ ಪರಿಣಾಮ ಬೀರಿಲ್ಲ. ಜೊತೆಗೆ ಬಹುತೇಕ ಈ ಲಸಿಕೆ ಸೋಂಕಿತರ ಚೇತರಿಕೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಸಂಸ್ಥೆ ಇದನ್ನು ಮಾರುಕಟ್ಟೆಗೆ ಬಿಡಲು ಸಿದ್ಧತೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.