ಬೆಂಗಳೂರು: ರಾಜ್ಯದಲ್ಲಿ ವಿಧಾನ ಪರಿಷತ್ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.
ಬೆಳಗ್ಗೆ 7 ಗಂಟೆಯಿಂದ ತೊಡಗಿದಂತೆ ಸಂಜೆ 5 ರ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಈ ನಾಲ್ಕು ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ 549 ಮತ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಕಣದಲ್ಲಿ 40 ಅಭ್ಯರ್ಥಿಗಳು ಇರುವುದಾಗಿಯೂ ತಿಳಿಸಿದ್ದಾರೆ. ನ. 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಧಾರವಾಡ, ದಾವಣಗೆರೆ, ಹಾವೇರಿ, ಗದಗ, ಉತ್ತರ ಕನ್ನಡ, ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರಗಳಲ್ಲಿ ಮತದಾನ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.