ನವದೆಹಲಿ: ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಆರಂಭಗೊಂಡಿದೆ. ಬೆಳಗ್ಗೆಯಿಂದಲೇ ಮತದಾನ ನಡೆಸಲು ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಈ ಹಿನ್ನೆಲೆಯಲ್ಲಿ ಟ್ವಿಟರ್ ಮೂಲಕ ಮನವಿ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಕರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮತಚಲಾಯಿಸಿ. ಮಾಸ್ಕ್ ಮತ್ತು ಎರಡು ಗಜಗಳ ಅಂತರ ಕಡ್ಡಾಯವಾಗಿ ಇರಲಿ ಎಂದಿದ್ದಾರೆ.
ಇಂದು ಮೊದಲ ಹಂತದ ಮತದಾನ ನಡೆಯುತ್ತಿದ್ದು, 16 ಜಿಲ್ಲೆಗಳ 71 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಸುಮಾರು 2.14 ಕೋಟಿ ಮತದಾರರು 1,066 ಅಭ್ಯರ್ಥಿಗಳ ಭವಿಷ್ಯವನ್ನು ಇಂದು ನಿರ್ಧರಿಸಲಿದ್ದಾರೆ.
ಕೊರೋನ ಸಾಂಕ್ರಾಮಿಕದ ನಡುವೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಚುನಾವಣಾ ಆಯೋಗವು ಸುರಕ್ಷಿತ ಮತದಾನಕ್ಕಾಗಿ ಹಲವಾರು ನಿರ್ದೇಶನಗಳನ್ನು ಹೊರಡಿಸಿದೆ.
बिहार विधानसभा चुनावों में आज पहले दौर की वोटिंग है।
सभी मतदाताओं से मेरा आग्रह है कि वे कोविड संबंधी सावधानियों को बरतते हुए, लोकतंत्र के इस पर्व में अपनी हिस्सेदारी सुनिश्चित करें।
दो गज की दूरी का रखें ध्यान, मास्क जरूर पहनें।
याद रखें, पहले मतदान, फिर जलपान!
— Narendra Modi (@narendramodi) October 28, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.