ಬೆಂಗಳೂರು: ರಾಜ್ಯ ಸರ್ಕಾರ ಇಂದು 2020 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೊರೋನಾ ಹಿನ್ನೆಲೆಯಲ್ಲಿ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಸಹ ಸರಳವಾಗಿ ಆಚರಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಈ ಸಂದರ್ಭದಲ್ಲಿ ಮಾಹಿತಿ ನೀಡಿದೆ.
ಈ ಬಾರಿ 65 ನೇ ಕರ್ನಾಟಕ ರಾಜ್ಯೋತ್ಸವ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ 65 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಮುಂದಾಗಿರುವುದಾಗಿ ತಿಳಿಸಿದೆ. ಈ ಸಮಾರಂಭ ನವೆಂಬರ್ 7 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಪ್ರಶಸ್ತಿ 1 ಲಕ್ಷ ರೂ. ಗಳು ಮತ್ತು 25 ಗ್ರಾಂ ಚಿನ್ನ ಹೊಂದಿರಲಿದೆ ಎಂದು ಈ ಸಂದರ್ಭದಲ್ಲಿ ಮೂಲಗಳು ತಿಳಿಸಿದೆ. ವಿವಿಧ ಕ್ಷೇತ್ರದ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುವುದಾಗಿಯೂ ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.