ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಬಂಡಿಪೋರಾದ ಹತ್ತು ಸ್ಥಳಗಳಲ್ಲಿ ಮತ್ತು ಬೆಂಗಳೂರಿನ ಒಂದು ಸ್ಥಳದಲ್ಲಿ ಶೋಧ ಕಾರ್ಯ ನಡೆಸಿತು. ಕೆಲವು ಎನ್ಜಿಒಗಳು ಮತ್ತು ಟ್ರಸ್ಟ್ಗಳು ಭಾರತ ಮತ್ತು ವಿದೇಶಗಳಲ್ಲಿ ದತ್ತಿ ಚಟುವಟಿಕೆಗಳ ಹೆಸರಿನಲ್ಲಿ ಹಣವನ್ನು ಸಂಗ್ರಹಿಸಿ ಅದನ್ನು ಅಕ್ರಮ ಚಟುವಟಿಕೆಗೆ ಬಳಸಿದ ಬಗ್ಗೆ ಮಾಹಿತಿ ಇರುವ ಹಿನ್ನೆಲೆಯಲ್ಲಿ ಈ ದಾಳಿಯನ್ನು ನಡೆಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಮತ್ತು ಉಗ್ರ ಚಟುವಟಿಕೆಗಳನ್ನು ನಡೆಸಲು ಆ ಹಣವನ್ನು ಕೆಲವು ಎನ್ಜಿಓಗಳು ಬಳಸುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ನಿಟ್ಟಿನಲ್ಲಿ ವಿಶ್ವಾಸಾರ್ಹ ಮಾಹಿತಿ ಪಡೆದ ಮೇಲೆ ಎನ್ಐಎ ಈ ತಿಂಗಳ ಆರಂಭದಲ್ಲಿ ಪ್ರಕರಣ ದಾಖಲಿಸಿತ್ತು.
ಶೋಧದ ಸಮಯದಲ್ಲಿ, ಹಲವಾರು ಮಹತ್ವದ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.