ಮಂಗಳೂರು: ರಾಜ್ಯದ ಮೀನುಗಾರಿಕಾ ಕಾಲೇಜಿಗೆ 51 ವರ್ಷ ಪೂರ್ಣವಾಗಿದೆ. ಇದನ್ನು ಕರ್ನಾಟಕ ಮೀನುಗಾರಿಕಾ ವಿಶ್ವ ವಿದ್ಯಾನಿಲಯವನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕಾಲೇಜಿನ ಆಡಳಿತ ಮಂಡಳಿ ಪ್ರಸ್ತಾವನೆ ಸಲ್ಲಿಸಿದೆ.
ಈ ಸಂಬಂಧ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಪರಿಶೀಲನಾ ಸಭೆ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಕಾಲೇಜಿನ ಡೀನ್ ಡಾ. ಸಂಥಿಲ್ ವೆಲ್ ಅವರು ಮನವಿ ಮಾಡಿದ್ದಾರೆ. ಸಚಿವರ ಸಲಹೆ ಸೂಚನೆಗಳನ್ನು ಪಡೆದುಕೊಂಡು ಸರ್ಕಾರಕ್ಕೆ ವಿಸ್ತೃತ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಕಾಲೇಜಿನ ಮೂಲಗಳು ತಿಳಿಸಿವೆ.
ಇನ್ನು ಮೀನುಗಾರಿಕಾ ವಿವಿ ಸ್ಥಾಪನೆಯಾದರೆ ಹೆಚ್ಚಿನ ಪ್ರಮಾಣದಲ್ಲಿ ಐಸಿಎಆರ್ ಗುರುತಿಸಲ್ಪಟ್ಟ ಕಾಲೇಜುಗಳನ್ನು ಆರಂಭ ಮಾಡಬಹುದು. ಜೊತೆಗೆ ಇದರಿಂದಾಗಿ ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆಯೂ ಇದೆ ಎಂದು ಸಂಥಿಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ದೇಶದಲ್ಲಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಗಳಲ್ಲಿ ಮೀನುಗಾರಿಕಾ ವಿವಿಗಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.