ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ಅನುಸರಿಸುವಂತೆ ತಿಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಉಸ್ತುವಾರಿ ಸಚಿವರುಗಳಿಗೆ ಪತ್ರ ಬರೆದಿರುವ ಅವರು ,ಕೊರೋನಾ ನಿಯಂತ್ರಣ ಮಾಡಲು 9 ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಸೂಚಿಸಿದ್ದಾರೆ. ಇದರಲ್ಲಿ ಗ್ರಾಮ ಮಟ್ಟದ ಮತ್ತು ನಗರ ಪ್ರದೇಶಗಳಲ್ಲಿನ ಬೂತ್ ಮಟ್ಟದ ಸಮಿತಿಗಳನ್ನು ಕ್ರಿಯಾಶೀಲಗೊಳಿಸಿ ಅವುಗಳ ಕಾರ್ಯಗಳನ್ನು ಪರಾಮರ್ಶಿಸುವುದು, ಕೊರೋನಾ ಸೋಂಕಿತರ ಪ್ರಾಥಮಿಕ ಸಂಪರ್ಕಿತರು ಕಡ್ಡಾಯವಾಗಿ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಕ್ರಮ ವಹಿಸುವುದು, ಕೊ-ಮಾರ್ಬಿಡಿಟಿ ಉಳ್ಳ ಹಿರಿಯ ನಾಗರಿಕರ ಆರೋಗ್ಯದ ಬಗ್ಗೆ, ಆರೋಗ್ಯಾಧಿಕಾರಿಗಳಿಂದ ನಿರಂತರ ನಿಗಾ ವಹಿಸುವುದು, ಹೋಂ ಐಸೋಲೇಷನ್, ಹೋಂ ಕ್ವಾರಂಟೈನ್ನಲ್ಲಿರುವವರ ಆರೋಗ್ಯದ ಮೇಲೆ ನಿಗಾ ವಹಿಸುವಂತೆಯೂ ಸೂಚಿಸಿದ್ದಾರೆ.
ಜೊತೆಗೆ, ಐಸಿಯುನಲ್ಲಿರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ, ಟೆಲಿ ಐಸಿಯು ವ್ಯವಸ್ಥೆ ಕಲ್ಪಿಸುವುದು, ಪ್ರತಿ ಸಾವಿನ ಬಗ್ಗೆ 24 ಗಂಟೆಗಳೊಳಗೆ ಡೆತ್ ಆಡಿಟ್ ವರದಿ ಸಲ್ಲಿಸುವುದು, ಕೊರೋನಾ ನಿಯಂತ್ರಣ ಕ್ರಮಗಳ ಕಡ್ಡಾಯ ಪಾಲಿಕೆಯಾಗುವಂತೆ ಕ್ರಮ ಕೈಗೊಳ್ಳುವುದು, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸುವುದು, ಜನರಲ್ಲಿನ ಕೊರೋನಾ ಭಯ ಹೋಗಲಾಡಿಸಲು ಪೂರಕ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಯಡಿಯೂರಪ್ಪ ಪತ್ರ ಮುಖೇನ ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಪತ್ರ ಬರೆದು, 9 ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದ್ದಾರೆ.@CMofKarnataka @BSYBJP pic.twitter.com/z9GwU7GZLa
— DIPR Karnataka (@KarnatakaVarthe) October 29, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.