ನವದೆಹಲಿ: ಟೈಟಲ್ ಕಾರಣದಿಂದಾಗಿ ತೀವ್ರ ವಿವಾದಕ್ಕೆ ಒಳಗಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಾಲಿವುಡ್ ಸಿನಿಮಾ ‘ಲಕ್ಷ್ಮೀ ಬಾಂಬ್’ ಕೊನೆಗೂ ತನ್ನ ಹೆಸರನ್ನು ಬದಲಿಸಿಕೊಳ್ಳುವ ಹಂತದಲ್ಲಿ ಇದೆ.
ಸಿನಿಮಾದ ನಿರ್ದೇಶಕ ರಾಘವನ್ ಲಾರೆನ್ಸ್ ಅವರು ಫಿಲ್ಮ್ ಸೆನ್ಸಾರ್ ಸರ್ಟಿಫಿಕೇಟ್ಗೆ ತೆರಳಿ ಹೆಸರು ಬದಲಾಯಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಹೇಳಲಾಗಿದೆ. ಜನರ ಭಾವನೆಗಳನ್ನು ಗೌರವಿಸುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸಿನಿಮಾ ತಂಡ ಹೇಳಿದೆ.
ಮೂಲಗಳ ಪ್ರಕಾರ ಸಿನಿಮಾ ತಂಡ ಹೆಸರನ್ನು ಕೇವಲ ‘ಲಕ್ಷ್ಮೀ ‘ ಎಂದು ಬದಲಾಯಿಸಲು ನಿರ್ಧರಿಸಿದೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಶೀರ್ಷಿಕೆ ಕುರಿತು ದೊಡ್ಡ ಮಟ್ಟದ ವಿವಾದ ಸೃಷ್ಟಿಯಾಗಿತ್ತು. ವಿವಾದಕ್ಕೆ ತೆರೆ ಎಳೆದು ಸಿನಿಮಾವನ್ನು ಪ್ರೇಕ್ಷಕರಿಗೆ ತಲುಪುವಂತೆ ಮಾಡುವ ಉದ್ದೇಶದಿಂದ ಸಿನಿಮಾ ತಂಡ ಈಗ ಶೀರ್ಷಿಕೆ ಬದಲಾವಣೆಯ ನಿರ್ಧಾರ ತೆಗೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.