ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಸುರಿದ ಮುಂಗಾರು ಮಳೆ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿಯನ್ನುಂಟು ಮಾಡಿದೆ. ಇದೀಗ ಹಿಂಗಾರು ಮಳೆಗೆ ಸಂಬಂಧಿಸಿದಂತೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ನವೆಂಬರ್ 1 ರಿಂದ ತೊಡಗಿದಂತೆ ರಾಜ್ಯದ ಹಲವೆಡೆ ಈಶಾನ್ಯ ಮಾರುತಗಳ ಕಾರಣದಿಂದ ಹಿಂಗಾರಿನಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ರಾಜ್ಯದೆಲ್ಲೆಡೆ ಮುಂಗಾರಿನಲ್ಲಿಯೂ ಹೆಚ್ಚಿನ ಮಳೆಯಾಗಿದ್ದು, ಅನೇಕ ಜಿಲ್ಲೆಗಳು ಪ್ರವಾಹಕ್ಕೂ ತುತ್ತಾಗಿದೆ. ಇದೀಗ ಹಿಂಗಾರು ಮಳೆಯ ಸರದಿಯಾಗಿದ್ದು, ಈ ಸಂದರ್ಭದಲ್ಲಿಯೂ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸೂಚನೆಗಳಿರುವುದಾಗಿ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.
ಇನ್ನು ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ, ಚಂಡಮಾರುತದ ಪರಿಣಾಮವಾಗಿಯೂ ರಾಜ್ಯದ ಬೆಂಗಳೂರು ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದೂ ಹವಾಮಾನ ಇಲಾಖೆ ತಿಳಿಸಿದ್ದು, ಎಚ್ಚರ ವಹಿಸುವಂತೆ ಸೂಚಿಸಿದೆ. ಹಾವೇರಿ, ಗದಗ, ಧಾರವಾಡ, ಬೆಳಗಾವಿ, ದಕ್ಷಿಣ ಒಳನಾಡುಗಳಲ್ಲಿ ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯಾಗುವ ಸಂಭವವನ್ನೂ ತಳ್ಳಿ ಹಾಕುವಂತಿಲ್ಲ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.