ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಗುರುವಾರ ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಹತ್ಯೆಯಾದವರಲ್ಲಿ ಒಬ್ಬರು ಸ್ಥಳೀಯ ಬಿಜೆಪಿ ಯುವ ಮುಖಂಡರಾಗಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲ ನೀಡದೆ ಮೂವರು ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
“ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ, ಫಿದಾ ಹುಸೇನ್ ಯಾತೂ (ಬಿಜೆಪಿ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ), ಉಮರ್ ರಶೀದ್ ಬೀಗ್ (ಬಿಜೆಪಿ ಕಾರ್ಯಕರ್ತ) ಮತ್ತು ಉಮರ್ ರಂಜಾನ್ ಹಜಮ್ (ಬಿಜೆಪಿ ಕಾರ್ಯಕರ್ತ) ಮೃತರು ಎಂಬುದು ತಿಳಿದು ಬಂದಿದೆ ”ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ನಮ್ಮ 3 ಯುವ ಕಾರ್ಯಕರ್ತರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಅವರು ಜಮ್ಮು ಮತ್ತು ಕಾಶ್ಮೀರಕ್ಕಾಗಿ ಅತ್ಯುತ್ತಮ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕರಾಗಿದ್ದರು. ದುಃಖದ ಈ ಸಮಯದಲ್ಲಿ ನನ್ನ ಸಂತಾಪ ಅವರ ಕುಟುಂಬಗಳೊಂದಿಗೆ ಇದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದಿದ್ದಾರೆ.
I condemn the killing of 3 of our young Karyakartas. They were bright youngsters doing excellent work in J&K. My thoughts are with their families in this time of grief. May their souls rest in peace. https://t.co/uSfsUP3n3W
— Narendra Modi (@narendramodi) October 29, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.