ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ಥಾನದ ಪಾತ್ರವನ್ನು ಅಲ್ಲಿನ ಸಚಿವ ಫವಾದ್ ಚೌಧರಿ ಒಪ್ಪಿಕೊಂಡಿದ್ದಾರೆ. 2019ರ ಪುಲ್ವಾಮಾ ಭಯೋತ್ಪಾದಕ ದಾಳಿ ಇಮ್ರಾನ್ ಖಾನ್ ಸರ್ಕಾರಕ್ಕೆ ದೊಡ್ಡ ಯಶಸ್ಸು ಎಂದು ಆತ ಪಾಕಿಸ್ಥಾನ ಸಂಸತ್ತಿನಲ್ಲಿ ಹೇಳಿದ್ದಾನೆ.
ಭಾರತವನ್ನು ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ಥಾನ ನೇರವಾಗಿ ಮತ್ತು ಪರೋಕ್ಷವಾಗಿ ಪ್ರೋತ್ಸಾಹಿಸುತ್ತಿದೆ ಮತ್ತು ಬೆಂಬಲಿಸುತ್ತದೆ ಎಂದು ಭಾರತ ಬಹಳ ಹಿಂದಿನಿಂದಲೂ ಹೇಳುತ್ತಾ ಬಂದಿದೆ. ಇದೀಗ ಪಾಕಿಸ್ಥಾನ ಸಚಿವರು ಮೊದಲ ಬಾರಿಗೆ ಅದನ್ನು ಒಪ್ಪಿಕೊಂಡಿದ್ದಾರೆ.
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ, ಭಾರತೀಯ ವಾಯುಪಡೆಯ ವಿಮಾನಗಳು ಪಾಕಿಸ್ಥಾನದ ಬಾಲಕೋಟ್ನಲ್ಲಿ ಜೈಶ್-ಎ-ಮೊಹಮ್ಮದ್ ತರಬೇತಿ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿದವು. ಪಾಕಿಸ್ಥಾನ ಮೂಲದ ಜೆಎಂ ಬಾಲಕೋಟ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ವಿದೇಶಾಂಗ ವ್ಯವಹಾರಗಳ ವಕ್ತಾರ ಅನುರಾಗ್ ಶ್ರೀವಾಸ್ತವ್ ಅವರು, ಭಾರತದ ವಿರುದ್ಧ ನಡೆಸಲಾಗುತ್ತಿರುವ ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ಪಾಕಿಸ್ಥಾನದ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.
ಎಲ್ಲಾ ಕಡೆಯಿಂದಲೂ ಟೀಕೆಗಳು ವ್ಯಕ್ತವಾದ ಬಳಿಕ ಫವಾದ್ ಚೌಧರಿ ತನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.