ಕೆವಾಡಿಯ: ಇಂದು ದೇಶದ ಮೊದಲ ಗೃಹ ಸಚಿವ, ರಾಷ್ಟ್ರದ ಏಕೀಕರಣದ ರುವಾರಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 145 ನೇ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಇಂದು ‘ಏಕತಾ ದಿವಸ್’ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನರ್ಮದಾ ನದಿ ತಟದಲ್ಲಿರುವ ಸರ್ದಾರ್ ಪಟೇಲರ ಬೃಹತ್ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ನಿನ್ನೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಪ್ರವಾಸದಲ್ಲಿದ್ದು ಅಲ್ಲಿ ಹತ್ತು ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇಂದು ಅವರು ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ತಮ್ಮ ಕಾರ್ಯವನ್ನು ಆರಂಭಿಸಿದ್ದಾರೆ.
ಬಳಿಕ ಅವರು ಕೆವಾಡಿಯ ಸಬರಮತಿ- ಸೀಪ್ಲೇನ್ ಸೇವೆಗೂ ಚಾಲನೆಯನ್ನು ನೀಡಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಅವರು ನಾಗರಿಕ ಸೇವಕರನ್ನು ವರ್ಚುವಲ್ ಆಗಿ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ವಾಟರ್ ಏರ್ಡ್ರೋಮ್ ಸೇವೆಯನ್ನು ಉದ್ಘಾಟಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.