ಬೆಂಗಳೂರು: ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಮೇಲೆಯೂ ಕೊರೋನಾ ಕರಿನೆರಳು ಬಿದ್ದಿದೆ. ಕೋವಿಡ್ನಿಂದಾಗಿ ರಾಜ್ಯದಲ್ಲಿ ಈಗಾಗಲೇ ಭಾರೀ ಪ್ರಮಾಣದ ಕಷ್ಟ ನಷ್ಟಗಳು ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಗೂ ಕೆಲವೊಂದು ನಿಬಂಧನೆಗಳನ್ನು ಸರ್ಕಾರ ಹೇರಿದೆ.
ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಜೊತೆಗೆ ಸರಳವಾಗಿ ಮತ್ತು ಸುರಕ್ಷಿತವಾಗಿ ಆಚರಣೆ ಮಾಡುವಂತೆ ಮತ್ತು ಕೊರೋನಾ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸರ್ಕಾರ ಕಿವಿಮಾತು ಹೇಳಿದೆ.
ಆಚರಣೆಯ ಸಂದರ್ಭದಲ್ಲಿ ಗರಿಷ್ಠ 100 ಮಂದಿಗೆ ಮಾತ್ರ ಭಾಗವಹಿಸಲು ಸರ್ಕಾರ ಸೂಚಿಸಿದೆ. ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯ. ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಸ್ಥಳೀಯಾಡಳಿತದ ಅನುಮತಿ ಪಡೆದೇ ರಾಜ್ಯೋತ್ಸವ ಆಚರಣೆ ಮಾಡಬೇಕು. ಮೆರವಣಿಗೆ ನಡೆಸುವಂತಿಲ್ಲ. ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡಿಕೊಳ್ಳುವುದು ಕಡ್ಡಾಯ. ಮಕ್ಕಳು, ಗರ್ಭಿಣಿಯರು, ವೃದ್ಧರು ಸಾಧ್ಯವಾದಷ್ಟು ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವಿರುವುದು. ಗುಂಪು ಸೇರದೇ ಇರುವುದು ಮಾಡುವಂತೆಯೂ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಈ ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ ಎನ್ಡಿಎಂಎ ಕಾಯ್ದೆಯನ್ವಯ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನು ರಾಜ್ಯ ಸರ್ಕಾರ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.