ಮಂಗಳೂರು: ಕಳೆದ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಅಧಿಕೃತವಾಗಿ ಅದಾನಿ ಸಂಸ್ಥೆಗೆ ಒಪ್ಪಿಸಲಾಯಿತು.
ದೇಶದ ವಿವಿಧ ವಿಮಾನ ನಿಲ್ದಾಣಗಳ ಖಾಸಗೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣಾ ಜವಾಬ್ದಾರಿ ಸಹ ಅದಾನಿ ಗ್ರೂಪ್ಗೆ ವಹಿಸಲಾಗಿತ್ತು. ನವೆಂಬರ್ 15ರ ಮುನ್ನ ಈ ವಿಮಾನ ನಿಲ್ದಾಣದ ನಿರ್ವಹಣಾ ಜವಾಬ್ದಾರಿಯನ್ನು ಅದಾನಿ ಸಮೂಹ ಸಂಸ್ಥೆ ವಹಿಸಿಕೊಳ್ಳಬೇಕಿದೆ ಎಂದು ಕೆಲ ದಿನಗಳ ಹಿಂದಷ್ಟೇ ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿತ್ತು. ಈ ಸಂಬಂಧ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಿ, ಇದೀಗ ಅದಾನಿ ಗ್ರೂಪ್ಸ್ ಈ ಜವಾಬ್ದಾರಿ ಹೊತ್ತುಕೊಂಡಿದೆ.
ವಿಮಾನ ನಿಲ್ದಾಣದಲ್ಲಿ ಹೇಗೆ ಕಾರ್ಯಾಚರಣೆ ನಡೆಸಬೇಕು ಎಂದು ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ. ಪ್ರಸ್ತುತ ಇರುವ ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳುಗಳ ಕಾಲ ಮಾತ್ರ ಇರಲಿದೆ. ಆ ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿಗಾಗಿ ಸಿಇಒ ಅವರನ್ನು ನೇಮಕ ಮಾಡಲಿದೆ ಎಂದು ಕೆಲ ದಿನಗಳ ಹಿಂದೆ ಮಾಹಿತಿ ನೀಡಿತ್ತು.
ಮುಂದಿನ ಒಂದು ವರ್ಷದವರೆಗೆ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆ ಜಂಟಿಯಾಗಿ ಕಾರ್ಯ ನಿರ್ವಹಿಸಲಿದೆ. ಈ ಸಂದರ್ಭದಲ್ಲಿ ಲಾಭ ನಷ್ಟ ವ್ಯವಹಾರ, ಬಾಡಿಗೆಯಂತಹ ವ್ಯವಹಾರಗಳ ಜವಾಬ್ದಾರಿಯನ್ನು ಅದಾನಿ ಸಂಸ್ಥೆ ತೆಗೆದುಕೊಳ್ಳಲಿದ್ದರೆ, ವಿಮಾನಗಳ ಆಗಮನ-ನಿರ್ಗಮನ ವಿಚಾರಗಳನ್ನು ಪ್ರಾಧಿಕಾರ ನೋಡಿಕೊಳ್ಳಲಿದೆ. ಜೊತೆಗೆ ಈ ಸಂಬಂಧ ಅದಾನಿ ಸಂಸ್ಥೆಗೆ ಈ ಎಲ್ಲಾ ವ್ಯವಹಾರಗಳ ಸಂಬಂಧ ಮಾರ್ಗದರ್ಶನವನ್ನು ನೀಡಲಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಈ ಹಿಂದೆ ತಿಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.