ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956ರ ನವೆಂಬರ್ 1 ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸದ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾವ್ರವರು ಕರ್ನಾಟಕದ ಏಕೀಕರಣದ ಚಳುವಳಿಯನ್ನು 1905ರಲ್ಲಿ ಪ್ರಾರಂಭಿಸಿದರು. 1950ರಲ್ಲಿ ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪುಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ ಮೈಸೂರು ರಾಜ್ಯವು ಉದಯವಾಯಿತು. 1956ರ ಮದ್ರಾಸ್. ಮುಂಬೈ ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯವು ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪುಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.
ನವೆಂಬರ್ 1 ಕನ್ನಡ ರಾಜ್ಯೋತ್ಸವ. ನಮ್ಮ ರಾಜ್ಯದೆಲ್ಲೆಡೆ ನವೆಂಬರ್ 1 ನ್ನು ಕನ್ನಡ ದಿನವನ್ನಾಗಿ ಆಚರಿಸುತ್ತೇವೆ. ನಮ್ಮ ನಾಡು ಕನ್ನಡ ನಾಡು. ಕರ್ನಾಟಕವು ತನ್ನದೇ ಆದ ಹಿರಿಮೆ ಗರಿಮೆ ಮತ್ತು ಪರಂಪರೆಯುಳ್ಳ ಭಾರತದ ರಾಜ್ಯಗಳಲ್ಲಿ ಒಂದಾಗಿದೆ. ಪ್ರಕೃತಿ ಸೌಂದರ್ಯ, ವನ್ಯ ಜೀವಿಗಳ ಸಮೃದ್ಧಿ ಹಾಗೂ ವಿಶ್ವ ಪರಂಪರೆಯ ಸಾಲಿನಲ್ಲಿ ಪ್ರಸಿದ್ಧಿ ಪಡೆದ ಕೀರ್ತಿ ನಮ್ಮ ಕರ್ನಾಟಕ ರಾಜ್ಯಕ್ಕಿದೆ.
ಕರ್ನಾಟಕ ಎಂಬ ಹೆಸರಿನ ಹಿನ್ನೆಲೆ: ಕರ್ನಾಟಕ ಎಂಬ ಹೆಸರು ಪ್ರಾಚೀನ ಕಾಲದಿಂದಲೂ ಬಂದಿದೆ. ಇದನ್ನು ಕರುನಾಡು (ಕರ್ + ನಾಡು) ಎಂದರೆ ಕಪ್ಪು ಮಣ್ಣಿನ ನಾಡು ಎಂದು ಕರೆಯುತ್ತಿದ್ದರು. ಮೈಸೂರು ಅರಸರ ಒಡೆತನದಲ್ಲಿದ್ದ ದಕ್ಷಿಣದ 9 ಜಿಲ್ಲೆಗಳನ್ನೊಳಗೊಂಡು 1958 ರಲ್ಲಿ ಮೈಸೂರು ರಾಜ್ಯವು ಉದಯವಾಯಿತು. ಅನಂತರ ಭಾಷಾ ಪ್ರಾಂತ್ಯಗಳಾಗಿ ವಿಂಗಡಿಸುವಾಗ ಮುಂಬಯಿ, ಹೈದರಾಬಾದ, ಮದ್ರಾಸ್ ಹಾಗೂ ಕೊಡಗು ಪ್ರಾಂತ್ಯಗಳಲ್ಲಿ ಹಂಚಿಹೋಗಿದ್ದ ಕನ್ನಡ ಭಾಷೆ ಮಾತನಾಡುವ ಜನರ ಪ್ರದೇಶಗಳನ್ನು ಒಟ್ಟಾಗಿ ಸೇರಿಸಿದ್ದರಿಂದ 1956 ನವೆಂಬರ್ 1 ರಂದು ವಿಶಾಲ ಮೈಸೂರು ರಾಜ್ಯವು ಅಸ್ತಿತ್ವಕ್ಕೆ ಬಂದಿತು. ಇದರ ಸವಿನೆನಪಿಗಾಗಿ ನವೆಂಬರ್ ತಿಂಗಳಲ್ಲಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಕನ್ನಡಿಗರ ಅಭಿಲಾಷೆಯಂತೆ 1973 ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು.
ಕದಂಬರಿಂದ ಪ್ರಾರಂಭವಾಗಿ, ರಾಷ್ಟ್ರಕೂಟ, ಹೊಯ್ಸಳರು, ಚಾಲುಕ್ಯರು, ವಿಜಯನಗರ ಹಾಗು ಮೈಸೂರಿನ ಅರಸರು ನಮ್ಮ ರಾಜ್ಯವನ್ನು ಆಳಿದ ಭವ್ಯ ಇತಿಹಾಸವಿದೆ. ಬಾದಾಮಿ ಐಹೊಳೆ ಪಟ್ಟದಕಲ್ಲು ಹಂಪಿಯ ಶಿಲ್ಪ ಕಲೆಯ ಭವ್ಯತೆ, ಬ್ಲೂ ಚೆನ್ನಕೇಶವ ವಿರೂಪಾಕ್ಷ, ಮೂಡಬಿದಿರೆಯ ಸಾವಿರ ಕಂಬದ ಬಸದಿ, ಮೈಸೂರಿನ ದಸರಾ ನಮ್ಮದೆಂಬ ಹೆಮ್ಮೆ ಇದೆ.
ಎಂಟು ಜ್ಞಾನ ಪೀಠ ಪ್ರಶಸ್ತಿ ನಮ್ಮ ಭಾಷೆಗಿದೆ. ಪ್ರಾಕೃತಿಕ ಸೌಂದರ್ಯದ ಘನಿ ಕೊಲಾರದ ಚಿನ್ನ ಕನ್ನಡದ್ದೇ. ಪಂಪ ರನ್ನ ಬಸವಣ್ಣ ಸರ್ವಜ್ಞ, ಅಕ್ಕ ಮಹಾದೇವಿ ಹೆಮ್ಮೆಯ ಕನ್ನಡಿಗರೇ.
ಸೂರ್ಯ ಮುಳುಗದ ಬ್ರಿಟೀಷ್ ಸಮ್ರಾಜ್ಯವನ್ನು ಮಣ್ಣು ಮುಕ್ಕಿಸಿದ ಕಿತ್ತೂರಿನರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಸಿಂಧೂರ ಲಕ್ಷ್ಮಣ, ಅಮರ ಸುಳ್ಯ ನಮ್ಮ ನಾಡಿನ ವೀರ ಶಿರೋಮಣಿಗಳು.
ಹೇಳುತ್ತಾ ಹೋದರೆ ಒಂದಲ್ಲ ಎರಡಲ್ಲ ನಮ್ಮ ನಾಡು ಅದ್ಭುತದಲ್ಲಿ ಅದ್ಭುತ. ಇಂದಿಗೂ ಸಾಧನೆಯ ಸ್ಥಾನದಲ್ಲಿ ನಿಂತು ಭಾರತದ ಏಳಿಗೆಗೆ ಶ್ರಮಿಸುತ್ತಿರುವ ಭವ್ಯ ನಾಡು ನಮ್ಮದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.