ಮಂಗಳೂರು: ರಾಜ್ಯ ಮಟ್ಟದ ಬಿಜೆಪಿ ಕಾರ್ಯಕಾರಿಣಿ ಸಭೆ ಮತ್ತು ಕೋರ್ ಕಮಿಟಿ ಸಭೆ ನ. 5 ರಂದು ನಗರದ ಟಿ.ವಿ ರಮಣ ಪೈ ಸಭಾಂಗಣದಲ್ಲಿ ನಡೆಯಲಿದೆ.
ಈ ಸಂಬಂಧ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಎಂ. ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದು, ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪೂರ್ಣ ಪ್ರಮಾಣದಲ್ಲಿ ಪದಾಧಿಕಾರಿಗಳ ತಂಡವನ್ನು ರಚಿಸಿದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಈ ಸಭೆಯನ್ನು ರಾಜ್ಯಾಧ್ಯಕ್ಷರು ಮಂಗಳೂರಿನಲ್ಲಿಯೇ ನಡೆಸಲು ತೀರ್ಮಾನಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ರಾಜ್ಯ ಘಟಕ, ವಿವಿಧ ಮೋರ್ಚಾಗಳ, ಪ್ರಕೋಷ್ಟಗಳ, ವಿಭಾಗಗಳ ಪದಾಧಿಕಾರಿಗಳು ಸೇರಿದಂತೆ ಸುಮಾರು 120 ಮಂದಿ ಭಾಗವಹಿಸುವುದಾಗಿಯೂ ಸುದರ್ಶನ್ ಹೇಳಿದ್ದಾರೆ.
ಈ ಕಾರ್ಯಕ್ರಮವನ್ನು ಬೆಳಗ್ಗೆ 10 ಗಂಟೆಯ ಸುಮಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ. ರಾಜ್ಯಾಧ್ಯಕ್ಷ ಕಟೀಲ್ ಅವರು ಇದರ ಅಧ್ಯಕತೆ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಸಂಘಟಿಸಲಿದ್ದಾರೆ. ಈ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಸೇರಿದಂತೆ ಇನ್ನೂ ಅನೇಕ ಗಣ್ಯರು ಭಾಗವಹಿಸಲಿರುವುದಾಗಿಯೂ ಸುದರ್ಶನ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.