ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ಸಂದರ್ಭದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಫುಲ್ಲಾ ಇಸ್ಲಾಂ ಮರ್ನನ್ನು ಎನ್ಕೌಂಟರ್ ಮಾಡಲಾಗಿದೆ.
ಸೈಫುಲ್ಲಾ ಕಳೆದ ಮೇ ತಿಂಗಳಿನಲ್ಲಿ ನಡೆದಿದ್ದ ರಿಯಾಝ್ ನಾಯ್ಕೊ ಸಂಹಾರವಾದ ಬಳಿಕ ಸಂಘಟನೆಯ ಮುಖ್ಯಸ್ಥನಾಗಿ ನೇತೃತ್ವ ವಹಿಸಿದ್ದ. ಈತ ಕಾಶ್ಮೀರದ ಕಣಿವೆಯಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಎಂಬ ಹಣೆಪಟ್ಟಿಯನ್ನು ಕಟ್ಟಿಕೊಂಡಿದ್ದ. ಈತನ ವಧೆ ಇದೀಗ ಭಾರತೀಯ ಸೇನೆಗೆ ಮಹತ್ವದ ಗೆಲುವನ್ನು ತಂದುಕೊಟ್ಟಿದೆ.
ಶ್ರೀನಗರದ ರಂಗ್ರೆತ್ ಪ್ರದೇಶದಲ್ಲಿ ಉಗ್ರಗಾಮಿಗಳು ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭಾರತೀಯ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭದಲ್ಲಿ ಉಗ್ರಗಾಮಿಗಳು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಸೇನೆ ಪ್ರತಿದಾಳಿ ನಡೆಸಿದೆ. ಈ ವೇಳೆ ಸೈಫುಲ್ಲಾ ವಧೆಯಾಗಿದೆ. ಜೊತೆಗೆ ಓರ್ವ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ ಎಂದೂ ಮೂಲಗಳು ಮಾಹಿತಿ ನೀಡಿವೆ. ಕಾರ್ಯಾಚರಣೆ ನಡೆಸಿದ ಪ್ರದೇಶದಿಂದ ಎಕೆ 47, ಪಿಸ್ತೂಲ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಸೇನೆ ವಶಕ್ಕೆ ಪಡೆದುಕೊಂಡಿರುವುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.